Advertisement
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಬಗ್ಗೆ ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತತ್‌ಕ್ಷಣ ಸ್ಪಂದಿಸಬೇಕು ಎಂದು ಅವರು ಅಧಿಕಾರಿಗಳಿಗೆ ಆದೇಶಿಸಿದರು.
Related Articles
Advertisement
ಬರ ಪರಿಹಾರಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ರಾಜ್ಯ ಸರಕಾರ ಬರಪೀಡಿತ ಎಂದು ಘೋಷಿಸಿರುವುದರಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಎರಡೂ ತಾಲೂಕುಗಳಿಗೆ ತಲಾ 30 ಲಕ್ಷ ರೂ. ಬಿಡುಗಡೆ ಮಾಡಲು ಅವರು ಸೂಚಿಸಿದರು. ಲಕ್ಯಾದಿಂದ ನೀರು
ಮಂಗಳೂರು ಮಹಾನಗರಪಾಲಿಕೆಗೆ ಕುದುರೆಮುಖ ಲಕ್ಯಾ ಡ್ಯಾಂನಿಂದ ನೀರನ್ನು ಶಾಶ್ವತವಾಗಿ ಪಂಪಿಂಗ್ ಮಾಡಲು ಅನುಮತಿಸಲು ಕುದುರೆಮುಖ ಸಂಸ್ಥೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, ತುಂಬೆ ನೇತ್ರಾವತಿ ಡ್ಯಾಂನಲ್ಲಿ ಸೋಮವಾರ 5 ಮೀಟರ್ ನೀರು ಸಂಗ್ರಹಣೆಯಾಗಿದೆ ಎಂದು ವಿವರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು. ಖಾಸಗಿ ಮೂಲಗಳಿಂದಲೂ ನೀರಿನ ವ್ಯವಸ್ಥೆ
ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಸಂದರ್ಭದಲ್ಲಿ ಹೊಸ ಬೋರ್‌ವೆಲ್ ಕೊರೆಯಲು ಕಾಯದೆ, ಖಾಸಗಿ ಬೋರ್‌ವೆಲ್‌ಗಳನ್ನು ತಹಶೀಲ್ದಾರ್ ಮೂಲಕ ಅಭಿಗ್ರಹಣ ಮಾಡಿ, ಅಲ್ಲಿಂದ ನೀರು ಪಡೆದು ಸಾರ್ವಜನಿಕರಿಗೆ ಪೂರೈಕೆ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮಕರಣಿಕರು ಪರಿಶೀಲನೆ ಮಾಡಿ, ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾ.ಪಂ. ಹಾಗೂ ಪಟ್ಟಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯ ಬಗ್ಗೆ ಪ್ರತೀ ವಾರ ಜಿಲ್ಲಾಧಿಕಾರಿ ಕಚೇರಿಗೆ ವರದಿ ನೀಡ ಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.