Advertisement
ವಿಧಾನ ಪರಿಷತ್‌ನಲ್ಲಿ ಸದಸ್ಯ ಕೇಶವ ಪ್ರಸಾದ್ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 101.17 ಲಕ್ಷ ಗ್ರಾಮೀಣ ಮನೆಗಳಿವೆ. ಜಲಜೀವನ್ ಮಿಷನ್ ಯೋಜನೆಯಡಿ ಇಲ್ಲಿಯವರೆಗೆ 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರಕಾರ 6,918.31 ಕೋಟಿ ರೂ.ಹಾಗೂ ರಾಜ್ಯ ಸರಕಾರ 9226.09 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಜಲಜೀವನ್ ಮಿಷನ್ ಕಾರ್ಯಕ್ರಮದಡಿ ಸುಸ್ಥಿರ ಜಲಮೂಲವನ್ನು ಆಧರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯ ಕಳಪೆ ಕಾಮಗಾರಿಗಳ ದೂರುಗಳನ್ನು ಪರಿಗಣಿಸಿದ್ದು, ಕಾಮಗಾರಿಗಳನ್ನು 3ನೇ ವ್ಯಕ್ತಿ ತಪಾಸಣೆ ಸಂಸ್ಥೆಯಿಂದ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಅದರಂತೆ ಬ್ಯೂರೋ ವೆರಿಟಿಸ್ (ಇಂ) ಸಂಸ್ಥೆಯಿಂದ ಮೂರನೇ ವ್ಯಕ್ತಿ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. Advertisement
71.50 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ
11:51 PM Dec 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.