Advertisement

ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು

01:11 PM Feb 21, 2021 | Team Udayavani |

ರಾಮನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಸೋಮ ವಾರದೊಳಗೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರಿನ ಪೂರೈಕೆಗಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಬೆಂಗಳೂರಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಗ್ರಾಮಗಳಿಗೆ ಈಗಾಗಲೇ ಪೈಪ್‌ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎಷ್ಟು ಗ್ರಾಮಗಳಿಗೆ ಇಲ್ಲ ಎಂಬ ಬಗ್ಗೆ ವರದಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಗೆ ಮಂಜೂರಾಗಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆ ದವು. 1,800 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಕುಡಿಯುವ ನೀರೊದಗಿಸುವ ಯೋಜನೆಯನ್ನುಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಶಾಸಕ ಎ.ಮಂಜುನಾಥ್‌, ಜಿಲ್ಲಾಧಿಕಾರಿ ಎಂ.ಎ ಸ್‌.ಅರ್ಚನಾ, ಜಿಪಂ ಸಿಇಒ ಇಕ್ರಂ, ಜಯರಾಮ್‌, ಮಹೇಶ, ಡಿಸಿಎಂ ಕಾರ್ಯದರ್ಶಿ ಪ್ರದೀಪ್‌ ಪ್ರಭಾಕರ್‌ ಉಪಸ್ಥಿತರಿದ್ದರು.

ಮಾಗಡಿಗೆ 0.21 ಟಿಎಂಸಿ ನೀರು :

ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಮಾಗಡಿ ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಮೂಲಕ ನೀರೊದಗಿಸುವ ಯೋಜನೆ ಬಗ್ಗೆ ಡಿಸಿಎಂ ಡಾ.ಸಿ.ಎ ನ್‌. ಅಶ್ವತ್ಥರಾಯಣ ಅಧಿಕಾರಿಗಳೊಂದಿಗೆ ಚರ್ಚಿಸಿದರು.

Advertisement

ತಾಲೂಕಿಗೆ ಮಂಚನಬೆಲೆ ಜಲಾಶಯದಿಂದ 0.91 ಟಿಎಂಸಿ, ವೈ.ಜಿ.ಗುಡ್ಡದಿಂದ 0.02 ಟಿಎಂಸಿ ನೀರು ಲಭ್ಯವಾಗಲಿದೆ. ಒಟ್ಟು 81 ಗ್ರಾಮಗಳಿಗೆ 0.21 ಟಿಎಂಸಿ ನೀರು ಸರಬರಾಜು ಮಾಡುವ ಯೋಜನೆ ಇದಾಗಿದೆ ಎಂದು ಅಧಿಕಾರಿ ಗಳು ಸಚಿವರಿಗೆ ಮಾಹಿತಿ ನೀಡಿದರು. 2011ರ ಜನಗಣತಿ ಪ್ರಕಾರ ಮಾಗಡಿ ತಾಲೂಕಿನಲ್ಲಿ 1.75 ಲಕ್ಷ ಜನಸಂಖ್ಯೆ ಇತ್ತು. ಈಗ 2 ಲಕ್ಷ ದಾಟಿರುವ ಸಾಧ್ಯತೆ ಇದೆ. 2055ಕ್ಕೆ ಎಷ್ಟು ಜನಸಂಖ್ಯೆಯನ್ನು ಅಂದಾ ಜಿಸಿ, ಅಷ್ಟೂ ಜನ ಸಂಖ್ಯೆಯನ್ನು ದೃಷ್ಟಿಯಲ್ಲಿರಿಸಿ ಕೊಂಡು ಇಟ್ಟುಕೊಂಡು ನೀರಾವರಿ ಯೋಜನೆಯನ್ನು ರೂಪಿಸಬೇಕು. ಯಾವ ಕಾರಣಕ್ಕೂ ಕಾಮಗಾರಿಗಳು ತಡವಾಗಬಾರದು ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next