ಉಡುಪಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬಡ್ಡಿ ರಹಿತ ಸಾಲ ಸೌಲಭ್ಯದ ಮೂಲಕ ಉಡುಪಿ ಜಿಲ್ಲೆಯ ಚೈತನ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು ಆರಂಭಿಸಿರುವ ಸವಿರುಚಿ ಕ್ಯಾಂಟೀನ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.
ಗುಣಮಟ್ಟದ ಆಹಾರ
ಮಹಿಳೆಯರಿಗೆ ಸೊÌàದ್ಯೋಗ ಕೈಗೊಳ್ಳುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದಾಗಿದ್ದು, ಉತ್ತಮ ಗುಣಮಟ್ಟದ ಆಹಾರ ನೀಡುವ ಮೂಲಕ ಈ ಸಂಚಾರಿ ಕ್ಯಾಂಟೀನ್ ಲಾಭದಾಯಕವಾಗಿ ನಡೆದು ಸೊÌàದ್ಯೋಗದ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಈ ಮೊಬೈಲ್ ಕ್ಯಾಂಟೀನ್ ಮೂಲಕ ಸಾರ್ವಜನಿಕರಿಗೆ ಆಹಾರ ವಿತರಿಸಲು ಎಲ್ಲ ರೀತಿಯ ಸಿದ್ದತೆ ಮಾಡಲಾಗಿದೆ. ವಾಹನ ನಿಲುಗಡೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ.
ಸಸ್ಯಾಹಾರಿ ,ಮಾಂಸಾಹಾರಿ ಊಟ ತಯಾರಿಸಲಾಗುವುದು. ಕಡಿಮೆ ಬೆಲೆಯಲ್ಲಿ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ಸಂಜೆ ತಿಂಡಿ, ಊಟ ಇದೆ. ಸದ್ಯ 9 ಮಂದಿ ತಂಡದಲ್ಲಿದ್ದಾರೆ ಎಂದು ಚೈತನ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಧನಲಕ್ಷ್ಮೀ ಮೂಡುಬೆಳ್ಳೆ ಹೇಳಿದ್ದಾರೆ. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಮತ್ತಿತರರು ಉಪಸ್ಥಿತರಿದ್ದರು.
ಸವಿರುಚಿ ಕ್ಯಾಂಟೀನ್‌ನಲ್ಲಿ ಇಡ್ಲಿಯನ್ನು ಸವಿದ ಸಚಿವ ಪ್ರಮೋದ್ ಮಧ್ವರಾಜ್ ಅವರು ಪ್ರಪ್ರಥಮ ಗ್ರಾಹಕನಾಗಿ 500 ರೂ. ಕೊಡುಗೆಯನ್ನು ಸ್ತ್ರೀಶಕ್ತಿ ಒಕ್ಕೂಟದವರಿಗೆ ನೀಡಿದರು.
10 ಲ.ರೂ. ಬಡ್ಡಿರಹಿತ ಸಾಲ
ಮುಖ್ಯಮಂತ್ರಿಗಳು 2017-18ರ ಬಜೆಟ್‌ನಲ್ಲಿ ಘೋಷಿಸಿರುವ ಸವಿರುಚಿ ಕ್ಯಾಂಟೀನ್‌ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಮೂಲಕ ಆರಂಭಿಸಲಾಗಿದೆ. ಆಹಾರ ಪದಾರ್ಥ ತಯಾರಿಸಿಟ್ಟುಕೊಂಡು ಈ ಮೊಬೈಲ್ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾದ ಸ್ಥಳಗಳಲ್ಲಿ ಮಾರಾಟ ಮಾಡಬೇಕು. ಈ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಮಹಿಳಾ ಅಭಿವೃದ್ಧಿ ನಿಗಮದಿಂದ 10 ಲ.ರೂ. ಬಡ್ಡಿ ರಹಿತ ಸಾಲ ನೀಡಲಾಗಿದೆ.
– ಪ್ರಮೋದ್ ಮಧ್ವರಾಜ್, ಉಸ್ತುವಾರಿ ಸಚಿವ