ಶಿರ್ವ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳ 3ನೇ ಸಂಜೀವಿನಿ ಸಂತೆಯು ಮಾ. 8 ರಂದು ಶಿರ್ವ ಮಹಿಳಾ ಮಂಡಲದ ಮಹಿಳಾ ಸೌಧದಲ್ಲಿ ನಡೆಯಿತು.
ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಪಾಟ್ಕರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ ಮೇಲೆ ನಿಂತು ಕುಟುಂಬ ನಿರ್ವಹಣೆಯ ಜತೆಗೆ ದೇಶ ಕಟ್ಟುವ ಕಾಯಕದಲ್ಲಿ ಭಾಗವಹಿಸಬೇಕಾಗಿದೆ. ಸ್ವಾವಲಂಬಿ ಭಾರತವಾಗುವ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಸಂಜೀವಿನಿ ಸಂತೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಮಜೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರತಾಪ್ ಮಾತನಾಡಿದರು.
ಶಿರ್ವ ಗ್ರಾ.ಪಂ. ಸೇರಿದಂತೆ ಮಜೂರು,ಮುದರಂಗಡಿ ,ಬೆಳ್ಳೆ ,ಇನ್ನಂಜೆ, ಕುತ್ಯಾರು ಗ್ರಾಮ ಪಂಚಾಯತ್‌ಗಳ ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಯಲ್ಲಿಯೇ ತಯಾರಿಸಿದ,ಉತ್ಪಾದಿಸಿದ ಮತ್ತು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು.
ಮಹಿಳಾ ದಿನಾಚರಣೆಯ ಅಂಗವಾಗಿ ವಿಷಜಂತು ಕಡಿತಕ್ಕೆ ಚಿಕಿತ್ಸೆ ನೀಡುತ್ತಿರುವ ನಾಟಿ ವೈದ್ಯೆ, ಶಿರ್ವ ಗ್ರಾ.ಪಂ. ಸದಸ್ಯೆ ಶಾಲಿನಿ ಡಿ. ಅಮೀನ್ ಅವರನ್ನು ಶಿರ್ವ ಗ್ರಾ.ಪಂ. ವತಿಯಿಂದ ಸಮ್ಮಾನಿಸಲಾಯಿತು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಸಾರ್ವಜನಿಕರಿಗೆ ಉಚಿತ ಮಧುಮೇಹ ರಕ್ತದೊತ್ತಡ ಮತ್ತು ಹಲ್ಲಿನ ತಪಾಸಣೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಎಸ್.ಆಚಾರ್ಯ, ಮಜೂರು ಗ್ರಾ.ಪಂ. ಅಧ್ಯಕ್ಷೆ ಶರ್ಮಿಳಾ ಜೆ. ಆಚಾರ್ಯ,ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಶಿರ್ವ ಒಕ್ಕೂಟದ ಅಧ್ಯಕ್ಷೆ ಗೀತಾ ವಾಗ್ಲೆ, ಕುತ್ಯಾರು-ಕಳತ್ತೂರು ಒಕ್ಕೂಟದ ಅಧ್ಯಕ್ಷೆ ಶಾರದೇಶ್ವರೀ ಗುರ್ಮೆ, ಬೆಳ್ಳೆ ಒಕ್ಕೂಟದ ಅಧ್ಯಕ್ಷೆ ಹೆಲೆನ್ ಡಿಸೋಜಾ,ಎನ್‌ಆರ್‌ಎಲ್‌ಎಂ ನೋಡಲ್ ಅಧಿಕಾರಿ ಗೀತಾ ಸುವರ್ಣ,ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ /ಹಾಲಿ ಸದಸ್ಯ ಹಸನಬ್ಬ ಶೇಖ್,ಶಿರ್ವಪಂ. ಕಾರ್ಯದರ್ಶಿ ಮಂಗಳಾ ಜೆ.ವಿ., ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಗಾಯತ್ರಿ,ಶಿರ್ವ, ಮುದರಂಗಡಿ ,ಇನ್ನಂಜೆ,ಬೆಳ್ಳೆ ,ಮುದರಂಗಡಿ ಮತ್ತು ಕುತ್ಯಾರು ಗ್ರಾಮ ಪಂಚಾಯತ್‌ಗಳ ಸದಸ್ಯರು, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿರ್ವ ಗ್ರಾ.ಪಂ. ಪಿಡಿಒ ಅನಂತ ಪದ್ಮನಾಭ ನಾಯಕ್ ಸ್ವಾಗತಿಸಿ,ವಂದಿಸಿದರು.
ಜಿ.ಪಂ.ಸಿಇಒ. ಭೇಟಿ :
ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್ ಭಟ್ ಸಂಜೀವಿನಿ ಸಂತೆಗೆ ಭೇಟಿ ಮಾತನಾಡಿ ಶಿರ್ವಗ್ರಾ.ಪಂ.ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರ ಸಂಜೀವಿನಿ ಸಂತೆಗೆ ಚಾಲನೆ ನೀಡಲಾಗಿದೆ. ಪರಿಸರದ 6 ಪಂಚಾಯತ್‌ಗಳವರು ಒಟ್ಟು ಸೇರಿ ಆಯೋಜಿಸಿದ ಸಂಜೀವಿನಿ ಸಂತೆಯು ಮಹಿಳೆಯರ ಸ್ವಾವಲಂಬಿಗಳಾಗುವುದರೊಂದಿಗೆ ಅವರ ಆರ್ಥಿಕ ಚಟುವಟಿಕೆಗಳಿಗೆ ಭದ್ರ ಬುನಾದಿಯಾಗುತ್ತದೆ ಎಂದು ಹೇಳಿದರು. ಎನ್‌ಆರ್‌ಎಲ್‌ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ, ಅಧಿಕಾರಿ ಪಾಂಡುರಂಗ, ಜಿ.ಪಂ.ಅಧಿಕಾರಿ ವರ್ಗ ಉಪಸ್ಥಿತರಿದ್ದರು.