Advertisement

ಮಕ್ಕಳ ಆರೋಗ್ಯ ತಪಾಸಣೆಗೆ ಚಾಲನೆ

10:14 PM Jun 25, 2021 | Team Udayavani |

ಹಾವೇರಿ: ಕೋವಿಡ್‌ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲೇ ಪ್ರಥಮವಾಗಿ ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸ್ಥಳೀಯ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಪಾಲ್ಗೊಂಡು ತಪಾಸಣೆ ನಡೆಸಲಿದ್ದಾರೆ. ಜೂ.25 ರಿಂದ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಆರಂಭಗೊಳ್ಳಲಿದ್ದು, ಜುಲೈ 30ರೊಳಗಾಗಿ ಜಿಲ್ಲೆಯ 16 ವರ್ಷದೊಳಗಿನ 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲಾಗುವುದು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಮಕ್ಕಳ ಪಾಲಕರಿಗೂ ಆರೋಗ್ಯ ತಪಾಸಣೆ ಹಾಗೂ ಕೋವಿಡ್‌ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ. ಮಕ್ಕಳ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ರಕ್ಷಾ ಕವಚದಂತೆ ಈ ಶಿಬಿರ ಆರಂಭಿಸಲಾಗಿದೆ. ತಪಾಸಣೆ ಸಂದರ್ಭದಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್‌, ಪ್ರೋಟಿನ್‌ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದರು.

ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ 30 ರಿಂದ 50 ಸಾವಿರ ಮಕ್ಕಳಿವೆ. ಅವರನ್ನು ತಪಾಸಣೆ ಮಾಡಿ, ಅವರ ಬಯೋಡಾಟಾ, ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ನಾಲ್ಕೈದು ತಿಂಗಳು ಮಾನಿಟರ್‌ ಮಾಡಲಾಗುವುದು. ಶಿಕ್ಷಕರು, ಪಾಲಕರು, ವೈದ್ಯಕೀಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ದಣಿವರಿಯದೆ ಕೆಲಸ ಮಾಡಿ ಯಶಸ್ವಿ ಮಾಡಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಮಾತನಾಡಿ, ರಾಜ್ಯದಲ್ಲೇ ಪ್ರಥಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಕಾಳಜಿಯಿಂದ ಕೋವಿಡ್‌ ಮೂರನೇ ಅಲೆಯ ಪ್ರಭಾವದಿಂದ ಮಕ್ಕಳನ್ನು ರಕ್ಷಿಸಲು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಮಕ್ಕಳಿಗೆ ಸಣ್ಣ ಜ್ವರ, ನೆಗಡಿ ಬಂದರೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ತಮ್ಮ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಹೋಗಬೇಡಿ. ಮುಂದಿನ ಮೂರು ತಿಂಗಳವರೆಗೆ ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಬೇರೆಯವರ ಮನೆಗೆ ಮಕ್ಕಳನ್ನು ಕಳುಹಿಸಬೇಡಿ. ಶಿಕ್ಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಚಿಕಿತ್ಸೆಗೆ ನೆರವು ಪಡೆಯಿರಿ ಎಂದು ಮನವಿ ಮಾಡಿಕೊಂಡರು.

Advertisement

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾ ಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿ  ಕಾರಿ ಶಿವಾನಂದ ಉಳ್ಳಾಗಡ್ಡಿ, ಡಿಎಚ್‌ಒ ಡಾ.ಎಚ್‌.ಎಸ್‌. ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್‌.ಹಾವನೂರ, ತಾಲೂಕು ಆರೋಗ್ಯಾಧಿ ಕಾರಿ ಡಾ.ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿ ಕಾರಿ ಎಂ.ಎಚ್‌ .ಪಾಟೀಲ, ನಗರಸಭೆ ಸದಸ್ಯರು, ವಿವಿಧ ಇಲಾಖಾ ಅ ಧಿಕಾರಿಗಳು ಇದ್ದರು.ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಮಕ್ಕಳ ಆರೋಗ್ಯ ತಪಾಸಣೆ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ,

Advertisement

Udayavani is now on Telegram. Click here to join our channel and stay updated with the latest news.

Next