Advertisement

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ; ಜಿಲ್ಲಾಧಿಕಾರಿಗಳಿಗೆ ಸಿಎಸ್‌ ಆದೇಶ

01:34 AM May 14, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್- 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು ಅವುಗಳನ್ನು ತತ್‌ಕ್ಷಣವೇ ಪುನರಾರಂಭಿಸಬೇಕಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಆದೇಶಿಸಿದ್ದಾರೆ.

Advertisement

ಬುಧವಾರ ಜಿಲ್ಲಾಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿದ ಅವರು, ಹಲವಾರು ಜಿಲ್ಲೆಗಳಲ್ಲಿ ರಸ್ತೆ ಕಾಮಗಾರಿಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಇನ್ನೂ ಪರಿಹಾರ ಧನ ಹಂಚಿಕೆ ಆಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗಣಿ ಗುತ್ತಿಗೆ ಮತ್ತು ಕ್ರಷರ್‌ ಘಟಕಗಳಿಗೆ ಅನುಮತಿ ನೀಡಿದಲ್ಲಿ ಕಾರ್ಮಿಕರಿಗೆ ಉದ್ಯೋಗ ದೊರೆಯುತ್ತದೆ. ಕೋವಿಡ್- 19 ಸೋಂಕು ನಿಯಂತ್ರಣದೊಂದಿಗೆ ಈಗ ಅಭಿವೃದ್ಧಿ ಕಾಮಗಾರಿಗಳತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಆರ್ಥಿಕ ಮಿತವ್ಯಯ ಜಾರಿಯಲ್ಲಿದ್ದು ತುರ್ತು ಮತ್ತು ಅಗತ್ಯ ಕಾಮಗಾರಿ ಮಾತ್ರ ಕೈಗೊಳ್ಳಬೇಕು. ಈಗಾಗಲೇ ಕ್ರಿಯಾ ಯೋಜನೆ ರೂಪಿಸಿ ಟೆಂಡರ್‌ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳ ಪುನರಾರಂಭಕ್ಕೆ ಮುನ್ನ ಇಲಾಖಾ ಮುಖ್ಯಸ್ಥರ ಜತೆ ಚರ್ಚಿಸಿ ಎಂದು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next