Advertisement

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

03:59 PM Feb 09, 2021 | Adarsha |

ಶಿವಮೊಗ್ಗ: ವ್ಯಕ್ತಿಯು ಸದಾ ಲವಲವಿಕೆಯಿಂದಿರಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ನೌಕರ ಆರೋಗ್ಯ ಕಾಪಾಡಿಕೊಂಡರೆ ಅವನ ಇಡೀ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಪಂ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವರ್ಷದ 365 ದಿನವೂ ಸರ್ಕಾರಿ ನೌಕರರು ಕಚೇರಿ ಕೆಲಸಗಳಲ್ಲಿ ತೊಡಗಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬ ನೌಕರನು ತನ್ನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ವ್ಯಾಯಾಮ ಹಾಗೂ ಪ್ರಾಣಾಯಾಮದಂತಹ ಚಟುವಟಿಕೆಯಲ್ಲಿ ತೊಡಗಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ:ನಾವು ಲಸಿಕೆ ಪಡೆದಿದ್ದೇವೆ..ನೀವೂ ಪಡೆಯಿರಿ

ನೆರೆ, ಕೋವಿಡ್‌ನ‌ಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ನೌಕರರು ತಮ್ಮ ಜೀವದ ಹಂಗನ್ನು ತೊರೆದು,ಕರ್ತವ್ಯ ನಿರ್ವಹಿಸಿದ್ದಾರೆ. ಇದರ ಪರಿಣಾಮವಾಗಿ ನೆರೆಯಲ್ಲಿ ಸಿಲುಕಿದಂತಹ ಅನೇಕ ಕುಟುಂಬಗಳು ರಕ್ಷಣೆಯಾದವು. ಅಲ್ಲದೆ ಕೋವಿಡ್‌ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಕ್ರೀಡಾಜ್ಯೋತಿ ಸ್ವೀಕರಿಸಿದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ವರ್ಷ ಪೂರ್ತಿ ನಾಡಿನ ಅಭಿವೃದ್ಧಿಯಲ್ಲಿ ಕೈಜೋಡಿಸುತ್ತಿರುವ ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳುತ್ತಾರೆ. ಇದರಿಂದ ತಮ್ಮ ದೈನಂದಿನ ಕೆಲಸ- ಕಾರ್ಯಗಳಿಗೆ ಮತ್ತಷ್ಟು ಹೆಚ್ಚಿನ ಉತ್ತೇಜನ ಸಿಕ್ಕಂತಾಗುತ್ತದೆ ಎಂದರು. ಸರ್ಕಾರಿ ನೌಕರರ ದಿನಾಚರಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಲ್ಲದೆ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ನೀಡಿದ್ದಾರೆ ಎಂದ ಅವರು, ಸರ್ಕಾರ ಹಾಗೂ ನೌಕರರ ನಡುವೆ ಸೇತುವೆಯಾಗಿ ಸಿ.ಎಸ್‌. ಷಡಾಕ್ಷರಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

Advertisement

ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಮಾತನಾಡಿ, ಮಾರ್ಚ್‌ ತಿಂಗಳಲ್ಲಿ ರಾಜ್ಯಮಟ್ಟದಕ್ರೀಡಾಕೂಡಾ ಬೀದರ್‌ ಅಥವಾ ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಪ್ರತೀ ವರ್ಷ ಮುಖ್ಯಮಂತ್ರಿಗಳು ಈ ಕ್ರೀಡಾಕೂಟಕ್ಕೆ 1 ಕೋಟಿ ರೂ. ಅನುದಾನ ನೀಡುತ್ತಿದ್ದರು. ಈ ಬಾರಿ 2 ಕೋಟಿ ರೂ. ಅನುದಾನ ನೀಡಿದ್ದಾರೆ.

ಅಲ್ಲದೆ ಜ ಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಈ ಹಿಂದೆ ಕ್ರೀಡಾ ಮತ್ತು ಯುವಜನ ಖಾತೆ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪನವರು 50 ಸಾವಿರದಿಂದ ಒಂದೂವರೆ ಲಕ್ಷಕ್ಕೆ ಅನುದಾನ ಹೆಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಮೇಯರ್‌ ಸುವರ್ಣಾ ಶಂಕರ್‌, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್‌. ಅರುಣ್‌, ಸೂಡಾ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಎಸ್‌. ದತ್ತಾತ್ರಿ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಎಂ.ಎಲ್‌. ವೈಶಾಲಿ, ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next