ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ ಮುಖ್ಯರಸ್ತೆಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಕನ್ಸಲ್‌ಟೆಂಟ್‌ಗಳು, ನರ್ಸಿಂಗ್ ಸಿಬ್ಬಂದಿ ಹಾಗೂ ಮಾರುಕಟ್ಟೆ ವಿಭಾಗದ 8-9 ಸಿಬ್ಬಂದಿ ಈ ಲಸಿಕಾ ಅಭಿಯಾನಕ್ಕೆ ಮೀಸಲಿಟ್ಟಿದ್ದು, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಸಂಯುಕ್ತ ಸುತ್ತಮುತ್ತ ಇರುವ 45 ವರ್ಷಕ ಮೇಲ್ಪಟ್ಟ ನಿವಾಸಿಗಳಿಗೆ ಲಸಿಕೆ ನೀಡುತ್ತಿದೆ.
ಈ ಬಗ್ಗೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಸಿಇಒ ಸಂದೀಪ್‌ಕುಮಾರ್ ಮಾತನಾಡಿ, ಕೋವಿಡ್ ಸೋಂಕು ಹರಡುತ್ತಿರುವ ಮತ್ತು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಹ ನಾಗರಿಕರು ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯವಾಗಿದೆ. ನಾವು ನಮ್ಮ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿ ಈ ಲಸಿಕೆ ಅಭಿಯಾನ ಉಪಕ್ರಮವನ್ನು ಕೈಗೊಂಡಿದ್ದಾರೆ.
ಇದರ ಮೂಲಕ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಸಮುದಾಯದ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ನಿಗದಿ ಪಡಿಸಿರುವ ಎಲ್ಲಾ ಶಿಷ್ಟಾಚಾರ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿವೆ. ಬಿಬಿಎಂಪಿ ಮಾರ್ಗ ಸೂಚಿಗಳನ್ನು ಪಾಲನೆ ಮಾಡುವ ಮೂಲಕ ನಮ್ಮ ಸ್ವಯಂ ಸೇವಕರು ದಿನಕ 75 ಜನರಿಗೆ ಲಸಿಕೆ ಹಾಕಲಾಗುತ್ತಿದೆ ಎಂದರು.
ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ. ಕಿರಣ್‌ಕುಮಾರ್ ಮಾತನಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಹೆಚ್ಚಿ ಜನಸಂದಣಿ ಇರುವ ಕಡೆ ಭಾಗಿಯಾಗದಿರುವುದು ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವ ಮೂಲಕ ಎಲ್ಲ ನಾಗರಿಕರು ರೋಗ ಹರಡುವುದನ್ನು ತಡೆಗಟ್ಟಬೇಕು. ಲಸಿಕೆ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದೆ, ಸಾರ್ವಜನಿಕರು ಲಸಿಕೆ ಹಾಕಿಸಿಕೊಂಡು ಇನ್ನಿತರರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೋತ್ಸಾಹಿಸಿಬೇಕೆ ಎಂದು ಮನವಿ ಮಾಡಿದರು.