ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ ಎಲ್ಲ ಕಾಲೇಜು ಮತ್ತು ವಿಶ್ವವಿದ್ಯಾನಿಲಯದಲ್ಲಿ ಎರಡನೇ ಸುತ್ತಿನ ಕೋವಿಡ್ ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ ನೀಡಿತು. ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಮುಖ್ಯ ಆವರಣದಲ್ಲಿ ಏರ್ಪಡಿಸಿದ್ದ ಅಭಿಯಾನಕ್ಕೆ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ಜೀವವಿದ್ದರೆ ಜೀವನ. ಬದುಕಿದರೆ ಭವಿಷ್ಯ ಎಂಬ ಸೂತ್ರ ಅರಿತು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡು ಆರೋಗ್ಯಕಾಪಾಡಿಕೊಳ್ಳಲು ಸ್ವಯಂ ಆಸಕ್ತಿಯಿಂದ ಮುಂದಾಗಬೇಕು ಎಂದು ಸಲಹೆ ನೀಡಿದರು.
ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರೇ ಆಸ್ತಿ. ಅವರ ಆರೋಗ್ಯ ರಕ್ಷಣೆ ಮಾಡುವುದು ವಿಶ್ವವಿದ್ಯಾನಿಲಯದ ಜವಾಬ್ದಾರಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳೂ ಸಹಪ್ರತಿಯೊಬ್ಬರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದ್ದು, ಅದರ ಭಾಗವಾಗಿ ವಿಶ್ವವಿದ್ಯಾನಿಲಯ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್ ಮಾತನಾಡಿ, ಕೊರೊನಾ-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಆರೋಗ್ಯ ಮತ್ತುಜೀವರಕ್ಷಣೆ ಬಹಳ ಮುಖ್ಯವಾಗಿದೆ. ಕೋವಿಡ್ ಲಸಿಕೆಯುಜೀವಾಪಾಯ ತಡೆಯಲು ನೆರವಾಗಲಿದ್ದು, ಅದಕ್ಕಾಗಿವಿಶ್ವವಿದ್ಯಾನಿಲಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಇದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಹೆಚ್ಚುಸುರಕ್ಷಿತ ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ಏರ್ಪಡಿಸುವ ಮುನ್ನ ಲಸಿಕೆ ಹಾಕಿಸುವುದು ಮುಖ್ಯವಾಗಿದೆ. ಅವರ ಆರೋಗ್ಯರಕ್ಷಣೆಮತ್ತು ಕೋವಿಡ್‌ನಿಂದ ಸುರಕ್ಷತೆ ಪಡೆಯುವುದಕ್ಕೂ ಆದ್ಯತೆ ನೀಡಲಾಗಿದೆ. ಹೀಗಾಗಿ ಆಂದೋಲನದ ರೀತಿಯಲ್ಲಿ ಲಸಿಕೆ ಹಾಕಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್. ಅನಿತಾ ಹೇಳಿದರು.