Advertisement

ರಾಜ್ಯ ಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟಕ್ಕೆ ಚಾಲನೆ

03:45 AM Jan 29, 2017 | Team Udayavani |

ಉಡುಪಿ: ಜಿಲ್ಲಾ ಹ್ಯಾಂಡ್‌ಬಾಲ್‌ ಅಸೋಸಿಯೇಶನ್‌ ಆಶ್ರಯದಲ್ಲಿ ನಡೆಯಲಿರುವ ರಿಪಬ್ಲಿಕ್‌ ಡೇ ಟ್ರೋಫಿ ರಾಜ್ಯ ಮಟ್ಟದ ಹೊನಲು ಬೆಳಕಿನ ಹ್ಯಾಂಡ್‌ಬಾಲ್‌ ಪಂದ್ಯಾಟವನ್ನು ಶನಿವಾರ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸಚಿವ ಪ್ರಮೋದ್‌ ಮಧ್ವರಾಜ್‌ ಉದ್ಘಾಟಿಸಿ ಕ್ರೀಡೆಯ ಬೆಳವಣಿಗೆಗೆ ರಾಜ್ಯ ಸರಕಾರ ವಿಶೇಷ ಆಸಕ್ತಿ ವಹಿಸುತ್ತಿದೆ ಎಂದರು. 

Advertisement

 ಜಿಲ್ಲಾ ಅಸೋಸಿಯೇಶನ್‌ ಅಧ್ಯಕ್ಷ ಅಲೆವೂರು ಹರೀಶ್‌ ಕಿಣಿ ಅಧ್ಯಕ್ಷತೆ ವಹಿಸಿದ್ದರು. ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನರಸಿಂಹಮೂರ್ತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ|ರೋಶನ್‌ಕುಮಾರ್‌ ಶೆಟ್ಟಿ, ರಾಜ್ಯ ಸಂಘದ ಜಂಟಿ ಕಾರ್ಯದರ್ಶಿಗಳಾದ ಲೋಕೇಶ ಎಂ., ರಾಘವೇಂದ್ರ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಜಿಲ್ಲಾ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಅಧ್ಯಕ್ಷ ದಿನೇಶ ಪುತ್ರನ್‌, ಬಾಸ್ಕೆಟ್‌ ಬಾಲ್‌ ಅಸೋಸಿಯೇಶನ್‌ ಅಧ್ಯಕ್ಷ ರಾಮದಾಸ ಕಾಮತ್‌, ಸೈಕ್ಲಿಂಗ್‌ ಕ್ಲಬ್‌ ಪ್ರತಿನಿಧಿ ಡಾ| ತಿಲಕ್‌ಚಂದ್ರ ಪೈ, ಜಿಲ್ಲಾ ಸ್ಕೇಟಿಂಗ್‌ ಅಸೋಸಿಯೇಶನ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಉಪಾಧ್ಯಾಯ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಅತಿಥಿಗಳಾಗಿದ್ದರು.  

 ಜಿಲ್ಲಾ ಸಂಘದ ಉಪಾಧ್ಯಕ್ಷ ಸುದರ್ಶನ ನಾಯಕ್‌ ಸ್ವಾಗತಿಸಿ, ಕಾರ್ಯದರ್ಶಿ ಸೀತಾರಾಮ್‌ ಗೌಡ ವಂದಿಸಿದರು. ಸ್ಟೀವನ್‌ ಕೊಲಾಸೊ ಕಾರ್ಯಕ್ರಮ ನಿರ್ವಹಿಸಿದರು. ಬೋರ್ಡ್‌ ಹೈಸ್ಕೂಲ್‌ನಿಂದ ನಡೆದ ಕ್ರೀಡಾಳುಗಳ, ಪ್ರೋತ್ಸಾಹಕರ ಮೆರವಣಿಗೆಗೆ ಚಲನಚಿತ್ರ ನಟ ಅರ್ಜುನ್‌ ಕಾಪಿಕಾಡ್‌ ಚಾಲನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next