Advertisement

14 ಸಾವಿರ ಮನೆಗಳ ನಿರ್ಮಾಣಕ್ಕೆ ಚಾಲನೆ: ಎಸ್‌.ಟಿ.ಸೋಮಶೇಖರ್‌

08:27 PM Feb 02, 2022 | Team Udayavani |

ಬೆಂಗಳೂರು:ಯಶವಂತಪುರ ಕ್ಷೇತ್ರದಲ್ಲಿ ಹದಿನಾಲ್ಕು ಸಾವಿರ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

Advertisement

ರಾಮೋಹಳ್ಳಿ ಗ್ರಾಮ ಪಂಚಾಯತ್‌ ನಲ್ಲಿ 94ಸಿಸಿಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು 14 ಸಾವಿರ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ವ್ಯಾಪ್ತಿಯಲ್ಲಿ ಏಳು ಸಾವಿರ ಮನೆಗಳು ನಿರ್ಮಾಣವಾಗಲಿದೆ. ಈ ಭಾಗದಲ್ಲಿ 400 ಜನ ಅರ್ಜಿ ಸಲ್ಲಿಸಿದ್ದು ಪ್ರತಿಯೊಬ್ಬರಿಗೂ ಮನೆ ಸಿಗಲಿದೆ ಎಂದು ಹೇಳಿದರು.

ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ ಎಲ್ಲಾ ಫಲಾನುಭಾವಿಗಳ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು.ಹಕ್ಕು ಪತ್ರದ ಜೊತೆಗೆ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ಕೆಲಸ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವಿಕಲಚೇತನರಿಗೆ ನಿವೇಶನ ಹಂಚಿಕೆ ಮಾಡಲು ಚಲಘಟ್ಟ ಗ್ರಾಮದಲ್ಲಿ 5 ಎಕರೆ ಜಾಗ ನೀಡಲಾಗಿದೆ. ಈ ಭಾಗದಲ್ಲಿ ಒಂದು ಎಕರೆ ಜಾಗ ಸಿಕ್ಕರೆ ಆಸ್ಪತ್ರೆ ನಿರ್ಮಾಣಕ್ಕೂ ಚಾಲನೆ ನೀಡಬಹುದು ಎಂದರು.

Advertisement

ಇದೇ ವೇಳೆ ರಾಮೋಹಳ್ಳಿ ರಂಗಮಂದಿರ ಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹನುಮಂತಪ್ಪ, ಗ್ರಾಪಂ ಅಧ್ಯಕ್ಷರಾದ ವೆಂಕಟಲಕ್ಷ್ಮಮ್ಮ, ತಾಪಂ ಇಒ ನಾಗವೇಣಿ, ಡಿಆರ್‌ ಮಂಜುನಾಥ್‌ ಸೇರಿದಂತೆ ಹಲವು ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next