ಪುತ್ತೂರು: ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಅ. 16 ರಂದು ನಡೆಯಿತು.
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮರ ಸಹಕಾರ ಸದನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮೀನುಗಾರಿಕಾ ಬಂದರು ಒಳನಾಡು ಜಲ ಸಾರಿಗೆ ಸಚಿವರು, ಶಾಸಕ ಎಸ್. ಅಂಗಾರ ರವರು ದೀಪ ಬೆಳಗಿಸಿದರು.
ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ಸುಳ್ಯ ತಹಶೀಲ್ದಾರ್ ಅನಿತ ಲಕ್ಷ್ಮೀ, ಸುಳ್ಯ ತಾಲೂಕು ಪಂಚಾಯತ್ ಇ.ಒ.ಭವಾನಿಶಂಕರ, ಡಿ.ಡಿ.ಎಲ್. ಆರ್. ನಿರಂಜನ್ , ಯೋಜನಾ ನಿರ್ದೇಶಕ ಹೆಚ್.ಆರ್. ನಾಯಕ್ ರವರು ಉಪಸ್ಥಿತರಿದ್ದರು. ಎ.ಸಿ.ಯತೀಶ್ ಉಳ್ಳಾಲ್ ಸ್ವಾಗತಿಸಿದರು.
ಇ.ಒ.ಭವಾನಿಶಂಕರ ವಂದಿಸಿದರು. ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಪುಸ್ತಕ ಬಿಡುಗಡೆ ಮಾಡಲಾಯಿತು.
ಸಚಿವರನ್ನು ಹಾಗೂ ಜಿಲ್ಲಾಧಿಕಾರಿಯವರನ್ನು ಚೆಂಡೆ ವಾದನ ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಆರಂಭಗೊಂಡಿತು.