ಚಿತ್ರದುರ್ಗ: ಮಹಾಮಾರಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಘಟ್ಟ ತಲುಪಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ಎರಡನೇ ಹಂತದ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆಯಿತು.
ಜಿಲ್ಲೆಯ ಆಡಳಿತದ ನೇತೃತ್ವ ವಹಿಸಿಕೊಂಡಿರುವ ಮೂವರು ಮಹಿಳಾ ಅ ಧಿಕಾರಿಗಳಾದ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿ ಕಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ. ನಂದಿನಿದೇವಿ ಲಸಿಕೆ ಪಡೆದು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಿದರು.
ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ 17 ಕಡೆಗಳಲ್ಲಿ ಎರಡನೇ ಹಂತದ ಕೊರೊನಾ ರೋಗ ನಿರೋಧಕ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಸಂಸ್ಥೆ, ಸಿರಿಗೆರೆ ಸಿಸಿಪಿ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಚಳ್ಳಕೆರೆ ತಾಲೂಕು ಆಸ್ಪತ್ರೆ, ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರ, ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರ, ಹಿರಿಯೂರು ತಾಲೂಕು ಆಸ್ಪತ್ರೆ, ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲೂಕಿನ ಬಿ. ದುರ್ಗ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲೂಕು ಆಸ್ಪತ್ರೆ, ಹೊಸದುರ್ಗ ತಾಲೂಕು ಆಸ್ಪತ್ರೆ, ಕೆ.ಕೆ. ಪುರ ಸಮುದಾಯ ಆರೋಗ್ಯ ಕೇಂದ್ರ-1, ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರ, ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆ, ರಾಂಪುರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಲಾಯಿತು. ಈ ವೇಳೆ ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಕೋವಿಡ್-19 ಲಸಿಕೆ ತುಂಬಾ ಸುರಕ್ಷಿತವಾಗಿದೆ. ಯಾವುದೇ ಭಯ, ಆತಂಕವಿಲ್ಲದೇ ಕೋವಿಡ್ ಲಸಿಕೆ ಪಡೆಯುವಂತೆ ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಆಶಿಸಿದರು.
ಇದನ್ನೂ ಓದಿ:ಇಂದಿನ ಮಹಿಳೆಯರದು ಸೀತಾ ಮಾತೆ ಪಾಡು
ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಹಾಗೂ ಇದರ ಅಡಿಯಲ್ಲಿ ಬರುವ ಸ್ಥಳೀಯಸಂಸ್ಥೆಗಳ ಸಿಬ್ಬಂದಿ ಸೇರಿದಂತೆ ಸೇರಿದಂತೆ ಒಟ್ಟು 2514 ಮಂದಿ ವಾರಿಯರ್ಸ್‌ಗೆ ಸೋಮವಾರ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದರು.
ನಗರಸಭೆ ಆಯುಕ್ತ ಜೆ.ಟಿ. ಹನಮಂತರಾಜು, ಡಿಎಚ್‌ಒ ಡಾ| ಸಿ.ಎಲ್. ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಸಿ. ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು