ನರಗುಂದ: ನರಗುಂದ ವಿಧಾನಸಭಾ ಮತಕ್ಷೇತ್ರದ ಸುಮಾರು 272 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಲೋಕಾರ್ಪಣೆ ಸಮಾರಂಭ ಉದ್ಘಾಟಿಸಲು ಬಂಡಾಯ ನಾಡು ನರಗುಂದಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಏ.15ರಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಭವ್ಯ ಸಮಾರಂಭ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡುವರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೃಷಿ ಸಚಿವ ಬಿ.ಸಿ.ಪಾಟೀಲ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಸಚಿವ ಉಮೇಶ ಕತ್ತಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಗಣಿ ಮತ್ತು ಭೂವಿಜ್ಞಾನ ಸಚಿವ ಆಚಾರ್ ಹಾಲಪ್ಪ ಬಸಪ್ಪ ಆಗಮಿಸಲಿದ್ದಾರೆ.
ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ, ಸಂಸದರಾದ ಪಿ.ಸಿ.ಗದ್ದಿಗೌಡ್ರ, ಶಿವಕುಮಾರ ಉದಾಸಿ, ಶಾಸಕ ಎಚ್.ಕೆ.ಪಾಟೀಲ, ವಿಪ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ಶಾಸಕ ರಾಮಣ್ಣ ಲಮಾಣಿ, ಕಾಂತಿಲಾಲ ಬನ್ಸಾಲಿ, ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಹವಾಲ್ದಾರ, ಉಪಾಧ್ಯಕ್ಷೆ ಅನ್ನಪೂರ್ಣ ಯಲಿಗಾರ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.