ನವಿಮುಂಬಯಿ: ಘನ್ಸೋಲಿಯ ಕಾರಣಿಕ ಕ್ಷೇತ್ರವಾಗಿರುವ ಶ್ರೀ ಮೂಕಾಂಬಿಕಾ ಮಂದಿರದ 15 ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 10 ರಂದು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಕೃಷ್ಣ ವಿಠuಲ ಪ್ರತಿಷ್ಠಾನದ ಸಂಚಾಲಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ಅವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಶಾಸಕ ಸಂದೀಪ್ ಜಿ. ನಾಯ್ಕ, ಥಾಣೆ ಮಹಾನಗರ ಪಾಲಿಕೆಯ ಮೇಯರ್ ಮೀನಾಕ್ಷೀ ರಾಜು ಶಿಂಧೆ ಅವರು ಉಪಸ್ಥಿತರಿದ್ದರು. ಅತಿಥಿಗಳಾಗಿ ನವಿಮುಂಬಯಿ ಉದ್ಯಮಿ ಅಣ್ಣಾವರ ಶಂಕರ್ ಶೆಟ್ಟಿ, ಮಹಾರಾಷ್ಟ್ರ ಹೊಟೇಲ್ ಫೇಡರೇಶನ್‌ನ ಅಧ್ಯಕ್ಷ ಜಗನ್ನಾಥ್ ಕೆ. ಶೆಟ್ಟಿ, ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ನೆರೂಲ್ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದ ಅಧ್ಯಕ್ಷ ಸಂಜೀವ ಎನ್. ಶೆಟ್ಟಿ, ಶ್ರೀ ಮೂಕಾಂಬಿಕಾ ದೇವಾಲಯದ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಪಿ. ಶೆಟ್ಟಿ, ಉಪಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ, ಮಹಿಳಾ ಮಂಡಳಿಯ ಕಾರ್ಯಾಧ್ಯಕ್ಷೆ ಆಶಾ ವಿ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರುಗಳಾದ ಶಕುಂತಳಾ ಸೋಮಶೇಖರ್ ಶೆಟ್ಟಿ, ಆಶಾ ವಿಠuಲ ಶೆಟ್ಟಿ, ರತ್ನಾ ತಮ್ಮಯ್ಯ ಗೌಡ, ವಿದ್ಯಾ ಹರೀಶ್ ಅಂಚನ್ ಅವರನ್ನು ಸಮ್ಮಾನಿಸಲಾಯಿತು. ಸಂಜೆ 5 ರಿಂದ ದೇವಾಲಯದ ಸದಸ್ಯರು, ತುಳುಕೂಟ ಐರೋಲಿ, ಚಿಣ್ಣರ ಬಿಂಬ, ರಂಗಭೂಮಿ ಫೈನ್‌ಆರ್ಟ್ಸ್ನ ಸದಸ್ಯರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ರಾತ್ರಿ 8 ರಿಂದ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ ಅವರ ನಿರ್ದೇಶನದಲ್ಲಿ ಕಿರು ತುಳು ನಾಟಕ ಪ್ರದರ್ಶನಗೊಂಡಿತು.
ರಾತ್ರಿ 9 ರಿಂದ ಅನ್ನಪ್ರಸಾದ, ರಾತ್ರಿ 10 ರಿಂದ ದೆಪ್ಪುಣಿಗುತ್ತು ಕುಟುಂಬಸ್ಥರ ಸೇವಾ ರೂಪದಲ್ಲಿ ಶ್ರೀ ಗೀತಾಂಬಿಕಾ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತೆ¾ ಯಕ್ಷಗಾನ ಪ್ರದರ್ಶನಗೊಂಡಿತು. ಸಮಾರಂಭದಲ್ಲಿ ಶ್ರೀ ಸಂತೋಷಿ ಮಾತಾ ದೇವಾಲಯ ಟ್ರಸ್ಟ್, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ:ಸುಭಾಷ್ ಶಿರಿಯಾ