Advertisement
ಅಶೋಕ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಆಯೋಜಿಸಿದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇಂದಿನಿಂದ 15 ದಿನಗಳ ಕಾಲ ಗ್ರಾಮೀಣ, ನಗರ, ಕೊಳಚೆ, ಗಣಿ ಪ್ರದೇಶಗಳು ಹಾಗೂ ಕ್ಷಯರೋಗಿಗಳು ಹೆಚ್ಚಿಗೆ ಇರುವ ಪ್ರದೇಶಗಳನ್ನು ಆಯ್ಕೆ ಮಾಡಿ ಸಮೀಕ್ಷೆಕೈಗೊಳ್ಳಲಾಗುತ್ತಿದೆ. ಇದರಲ್ಲಿ ಪತ್ತೆಯಾದ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿ ಎಂದು ಆರೋಗ್ಯ ಕಾರ್ಯಕರ್ತರಿಗೆ
ಸೂಚಿಸಿದರು.
ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರು,
ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1607 ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ತಂಡಕ್ಕೆ ಇಬ್ಬರಂತೆ ಒಟ್ಟು 3214 ಸಿಬ್ಬಂದಿಗಳು ಮತ್ತು 322 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಕಲಬುರಗಿ ಜಿಲ್ಲೆ ಸೇರಿದಂತೆ ಭಾರತ ದೇಶದ ಒಟ್ಟು ಐವತ್ತು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Related Articles
ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತವಾದ ಕೆಮ್ಮು, ಜ್ವರ, ಅದರಲ್ಲೂ ಸಂಜೆ ವೇಳೆ ಹೆಚ್ಚಾಗುವುದು ಮತ್ತು ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವಂತಹ ಕ್ಷಯರೋಗದ ಲಕ್ಷಣಗಳು ಕಂಡು
ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಿ. ಕ್ಷಯರೋಗ ಖಚಿತಪಟ್ಟರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಡಾಟ್ಸ್ ಚಿಕಿತ್ಸೆ ಮತ್ತು ಔಷಧಿ ನೀಡಲಾಗುವುದು.
ಡಾ| ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
Advertisement