Advertisement

ಮಹದಾಯಿ ಯೋಜನೆ ಆದಷ್ಟು ಬೇಗ ಕಾಮಗಾರಿಗೆ ಚಾಲನೆ : ಜಾರಕಿಹೊಳಿ

10:08 AM Feb 29, 2020 | Sriram |

ಬೆಂಗಳೂರು: ಕೇಂದ್ರ ಸರ್ಕಾರ ಮಹದಾಯಿ ನ್ಯಾಯ ಮಂಡಳಿಯ ತೀರ್ಪಿಗೆ ಗೆಜೆಟ್‌ ನೊಟಿಫಿಕೇಶನ್‌ ಹೊರಡಿಸಿರುವುದರಿಂದ ಆದಷ್ಟು ಶೀಘ್ರದಲ್ಲಿಯೇ ಟೆಂಡರ್‌ ಕರೆದು ಯೋಜನೆ ಕಾಮಗಾರಿ ಆರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸುತ್ತೇವೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್‌ ಸಿದ್ದವಿದೆ. ಅದನ್ನು ನ್ಯಾಯಾಧೀಕರಣಕ್ಕೆ ತೋರಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಮಹದಾಯಿ ನದಿಯಲ್ಲಿ 188 ಟಿಎಂಸಿ ನೀರು ಲಭ್ಯವಿದ್ದು, ಕರ್ನಾಟಕಕ್ಕೆ 13.42 ಟಿಎಂಸಿ, ಗೋವಾ 33.395 ಟಿಎಂಸಿ ಹಾಗೂ ಮಹಾರಾಷ್ಟ್ರ 1.30 ಟಿಎಂಸಿ ನೀರು ಬಳಕೆಗೆ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕಕ್ಕೆ ಹಂಚಿಕೆ ಮಾಡಿರುವ 13.42 ಟಿಎಂಸಿ ನೀರಿನಲ್ಲಿ ಹುಬ್ಬಳ್ಳಿ ಧಾರವಾಡ ನಗರಗಳಿಗೆ ಕುಡಿಯುವ ನೀರಿನ ಬಳಕೆಗಾಗಿ ಕಳಸಾ ನಾಲೆಗೆ 1.72 ಟಿಎಂಸಿ ಮತ್ತು ಬಂಡೂರಿ ನಾಲೆಗೆ 2.18 ಟಿಎಂಸಿ, ಕಣಿವೆಯೊಳಗೆ ಬಳಕೆಗಾಗಿ 1.5 ಟಿಎಂಸಿ ಹಾಗೂ ಮಹದಾಯಿ ಜಲ ವಿದ್ಯುತ್‌ ಯೋಜನೆಗಾಗಿ 8.02 ಟಿಎಂಸಿ ವಿಂಗಡಿಸಲಾಗಿದೆ. ನ್ಯಾಯಾಧೀಕರಣದ ಮುಂದೆ 36.55 ಟಿಎಂಸಿ ನೀರಿನ ಹಂಚಿಕೆಗಾಗಿ ರಾಜ್ಯ ಸರ್ಕಾರ ಬೇಡಿಕೆ ಮಂಡಿಸಿದೆ. ಹೆಚ್ಚಿನ ನೀರಿಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಮಹದಾಯಿ ನೀರಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ರೈತರು, ತಾಂತ್ರಿಕ ಹಾಗೂ ಕಾನೂನು ತಂಡಕ್ಕೆ ಅಭಿನಂದನೆಗಳು. ಕೇಂಧ್ರದ ಗೆಜೆಟ್‌ ಅಧಿಸೂಚನೆ ಹೊರಡಿಸಲು ಸಹಕಾರ ನೀಡಿರುವ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಹಾಗೂ ಸುರೇಶ್‌ ಅಂಗಡಿ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರಿಗೂ ಅಭಿನಂದನೆಗಳು ಎಂದು ಹೇಳಿದರು.

ರಾಜ್ಯ ಸರ್ಕಾರ ಕಾಮಗಾರಿ ಆರಂಭಿಸಲು ಪರಿಸರ ಇಲಾಖೆ ಹಾಗು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಾಗಿದೆ. ನೀರು ಭಾವನಾತ್ಮಕ ವಿಷಯ.ಹಾಗಾಗಿ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ. ಅತಿ ಶೀಘ್ರದÇÉೇ ನಮ್ಮ ಪಾಲಿನ ನೀರಿನ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

Advertisement

ಅಲ್ಲದೇ ಮಹಾದಾಯಿ ಸೇರಿದಂತೆ ವಿವಿಧ ನೀರಾವರಿ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯಬೇಕು ಎಂಬುದು ನಮ್ಮ ಇಚ್ಛೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಪ್ರಕರಣಗಳನ್ನು ವಾಪಸ್‌ ಪಡೆಯಲಾಗುತ್ತದೆ. ಜುಲೈನಲ್ಲಿ ಮಹದಾಯಿ ವಿವಾದದ ಬಗ್ಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಆಗ ರಾಜ್ಯಕ್ಕೆ ಮತ್ತಷ್ಟು ಹೆಚ್ಚಿನ ಪಾಲು ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next