ಬೆಂಗಳೂರು: ಮನೆ ಬಾಗಿಲಿಗೇ ಕಂದಾಯ ದಾಖಲೆಗಳನ್ನು ವಿತರಣೆ ಮಾಡುವ ವಿನೂತನ ಯೋಜನೆಗೆ ಶನಿವಾರ ಚಾಲನೆ ಸಿಗಲಿದೆ.
ಈ ಯೋಜನೆಗೆ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗೀರ್ಲಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸಚಿವರಾದ ಡಾ.ಸುಧಾಕರ್, ಎಂ.ಟಿ.ಬಿ.ನಾಗರಾಜ್ ಉಪಸ್ಥಿತರಿರಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಇದನ್ನೂ ಓದಿ:ಪಾಕಿಸ್ಥಾನಕ್ಕೆ ‘ಆಕಸ್ಮಿಕ’ ಕ್ಷಿಪಣಿ ಉಡಾವಣೆ : ರಕ್ಷಣಾ ಸಚಿವಾಲಯ ವಿಷಾದ
ಸರ್ಕಾರಿ ಸೌಲಭ್ಯಗಳನ್ನು ನಾಗರಿಕರ ಮನೆಗೆ ತಲುಪಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅದರಂತೆ, ಕಂದಾಯ ದಾಖಲೆಗಳಾದ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.