Advertisement

White House: ಶ್ವೇತಭವನದ ಗೇಟ್‌ಗೆ ಕಾರು ಡಿಕ್ಕಿ… ಪೊಲೀಸರಿಂದ ಚಾಲಕನ ವಿಚಾರಣೆ

08:35 AM Jan 09, 2024 | Team Udayavani |

ವಾಷಿಂಗ್ಟನ್‌: ಅಮೆರಿಕದ ಶ್ವೇತಭವನದ ಸಂಕೀರ್ಣದ ಗೇಟ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ ಪರಿಣಾಮ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಸೋಮವಾರ ಸಂಜೆ ಸುಮಾರು ಆರು ಗಂಟೆಯ ವೇಳೆಗೆ ಈ ಘಟನೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿರುವುದೋ ಅಥವಾ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವುದೋ ಎಂಬುದರ ಕುರಿತು ತನಿಖೆ ನಡೆಸುತ್ತಿರುವುದರಿಂದ ಚಾಲಕನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಯುಎಸ್ ಸೀಕ್ರೆಟ್ ಸರ್ವೀಸ್ ಮುಖ್ಯಸ್ಥ ಆಂಥೋನಿ ಗುಗ್ಲಿಲ್ಮಿ ಹೇಳಿದ್ದಾರೆ.

ಕಳೆದ ತಿಂಗಳು ವ್ಯಕ್ತಿಯೊಬ್ಬರು ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಅವರ ವಾಹನಕ್ಕೆ ಆಕಸ್ಮಿಕವಾಗಿ ತನ್ನ ವಾಹನವನ್ನು ಡಿಕ್ಕಿ ಹೊಡೆದ ನಂತರ ಕುಡಿದು ವಾಹನ ಚಲಾಯಿಸಿದ ಆರೋಪ ಹೊರಿಸಲಾಯಿತು. ಅದೇ ರೀತಿ ಈ ಘಟನೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bidar; ಸಂಸದ ಖೂಬಾಗೆ ಟಿಕೆಟ್‌ ಸಿಗುತ್ತದಾ? ಖಂಡ್ರೆ ಕಣಕ್ಕಿಳಿಯುತ್ತಾರಾ?

Advertisement
Advertisement

Udayavani is now on Telegram. Click here to join our channel and stay updated with the latest news.

Next