ಬೆಂಗಳೂರು: ಕಾರು ಚಾಲಕನೊಬ್ಬ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಮದನ್ (25) ಆತ್ಮಹತ್ಯೆ ಮಾಡಿಕೊಂಡ ಚಾಲಕ.
ಶನಿವಾರ ರಾತ್ರಿ 9.30ಕ್ಕೆ ರಾಜರಾಜೇಶ್ವರಿ ನಗರದ ಹಲಗೆವಡೇರಹಳ್ಳಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬ ಸದಸ್ಯರಿಗೆ ಮೃತೇದಹ ಹಸ್ತಾಂತರಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಶಿವಮೊಗ್ಗದಿಂದ ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದ ಮದನ್, ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿದ್ದ. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟು ಆರ್.ಆರ್. ನಗರದಲ್ಲಿ ಉದ್ಯಮಿಯೊಬ್ಬರ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಹಲಗೆವಡೇರಹಳ್ಳಿಯ ಸ್ನೇಹಿತ ತೇಜು ಎಂಬಾತನ ರೂಮ್ನಲ್ಲಿ ವಾಸವಾಗಿದ್ದ. ಶನಿವಾರ ಸಂಜೆ ರೂಮ್ನಲ್ಲಿದ್ದ ಮದನ್, ರಾತ್ರಿ 9.30ಕ್ಕೆ ಏಕಾಏಕಿ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದಕ್ಕೂ ಮೊದಲು ತನ್ನ ಸ್ನೇಹಿತನ ಮೊಬೈಲ್ ನಂಬರ್ ಅನ್ನು ಬರೆದಿಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ನೋಟ್ ಕೂಡ ಪತ್ತೆಯಾಗಿಲ್ಲ. ಕೆಲ ದಿನಗಳಿಂದ ಮದನ್ ಮಾನಸಿಕವಾಗಿ ನೊಂದಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಸ್ನೇಹಿತರು ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.