ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ.
Advertisement
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ವಾಹನದಲಿದ್ದ ಐದು ಜನ ಪ್ರವಾಸಿಗರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.