Advertisement

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

10:09 AM Nov 12, 2024 | Team Udayavani |

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 120ಕ್ಕೂ ಹೆಚ್ಚು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದಲ್ಲದೆ, ಅವರ ಚಾಲನಾ ಪರವಾನಗಿ(ಡಿ.ಎಲ್) ಅಮಾನತಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಜತೆಗೆ ಮದ್ಯ ಸೇವಿಸಿ ಚಾಲನಾ ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,  ಕಳೆದ 10 ತಿಂಗಳ ಅವಧಿಯಲ್ಲಿ ಸುಮಾರು 20 ಸಾವಿರ ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ. ಈ ಪೈಕಿ 120 ಚಾಲಕರು ಮದ್ಯದ ಅಮಲಿನಲ್ಲಿ ಚಾಲನೆ ಮಾಡಿರುವುದು ಪತ್ತೆಯಾಗಿದ್ದು, ಎಲ್ಲರ ಚಾಲನಾ ಪರವಾನಗಿ ಅಮಾತನಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಮದ್ಯದ ಅಮಲಿನಲ್ಲಿ ಶಾಲಾ ವಾಹನ ಚಾಲನೆ ಮಾಡುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅಂತಹ ಚಾಲಕರ ಡ್ರೈವಿಂಗ್‌ ಲೈಸೆನ್ಸ್‌ ಅಮಾನತಿಗೂ ಕ್ರಮಕೈಗೊಳ್ಳ ಲಾಗುತ್ತಿದೆ.

ಈ ಬಗ್ಗೆ ಶಾಲಾ ಆಡಳಿತ ಮಂಡಳಿಗೂ ನೋಟಿಸ್‌ ನೀಡಲಾಗಿದೆ. ಆದರೂ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಇನ್ಮುಂದೆ ಅಂತಹ ಶಾಲಾ ವಾಹನ ಪರವಾನಗಿ ರದ್ದುಗೊಳಿಸುವ ಕುರಿತು ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಅನುಚೇತ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next