ಶಾಲಾ-ಕಾಲೇಜು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಹಾಗೂ ನಿಯಮಗಳ ಕುರಿತು ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ವಾಹನ ಸಂಚಾರ ಮಾಡುವಾಗ ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯ. ನಿಯಮಗಳನ್ನು ಪಾಲಿಸಿದ್ದಲ್ಲಿ ಅಪಘಾತಗಳಿಂದ ದೂರವಿರಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
Advertisement
ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ಅಪಘಾತವನ್ನು ತಪ್ಪಿಸುವಲ್ಲಿ ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಸೂಚನಾ ಫಲಕ ಇಲ್ಲದಿರುವುದು, ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುವುದು, ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಮಾತನಾ ಡುವುದರಿಂದ ಅಪಘಾತಗಳು ಸಂಭವಿಸುವುದು ಹೆಚ್ಚು. ಆದ್ದರಿಂದ ಇವುಗಳಿಂದ ಚಾಲಕರು ದೂರವಿರಬೇಕು ಎಂದು ಅವರು ಸಲಹೆ ಮಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಅವರು ಮಾತನಾಡಿ ರಸ್ತೆ ಸುರಕ್ಷತೆ ಮತ್ತು ನಿಯಮಗಳ ಬಗ್ಗೆ ವಾಹನ ಚಾಲಕರಲ್ಲಿ ಮಾಹಿತಿ ಇರಬೇಕು. ವಾಹನ ಚಾಲನಾ ಪರವಾನಗಿ, ವಾಹನ ದಾಖಲೆಗಳು ಕಡ್ಡಾಯವಾಗಿ ಇರಬೇಕು ಎಂದು ಅವರು ಹೇಳಿದರು. ಪೊಲೀಸ್ ಇನ್‌ಸ್ಪೆಕ್ಟರ್ ಅನೂಪ್ ಮಾದಪ್ಪ ಅವರು ಮಾತನಾಡಿ ಶಾಲಾ ವಾಹನ ರಹದಾರಿ ಪಡೆದಿದೆಯೇ ಇಲ್ಲವೆ ಎಂಬುದನ್ನು ಗಮನಿಸಬೇಕು, ವಾಹನವು ಎಲ್ಲಿಂದ ಎಲ್ಲಿಯವರೆಗೆ ಸಂಚಾರ ಮಾಡುತ್ತಿದೆ ಎಂಬ ಮಾಹಿತಿ, ಶಾಲೆಯ ಹೆಸರು, ಮತ್ತಿತರ ಮಾಹಿತಿ ಒಳಗೊಂಡಿರಬೇಕು ಎಂದರು.
Related Articles
Advertisement
ಟ್ರಾವಲ್ ಕೂರ್ಗ್ ಸಂಸ್ಥೆಯ ಸತ್ಯ, ಕೆಎಸ್‌ಆರ್‌ಟಿಸಿ ಮಡಿಕೇರಿ ಡಿಪೋ ವ್ಯವಸ್ಥಾಪಕರಾದ ಗೀತಾ, ಸಾರ್ವಜನಿಕರು ವಾಹನ ಚಾಲಕರು ಮತ್ತು ಮಾಲಕರು, ವಾಹನ ಚಾಲಕ ಸಂಘದ ಅಧ್ಯಕ್ಷರು ಮೊದಲಾದವರು ಉಪಸ್ಥಿತರಿದ್ದರು.ಪೊಲೀಸ್ ಇನ್ಸ್‌ಪೆಕ್ಟರ್ ಚೇತನ್ ನಿರೂಪಿಸಿ ವಂದಿಸಿದರು.