ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ಅಪಾಯಕಾರಿ ಯಾಗಿ ಕಾರು ಚಲಾಯಿಸಿದ್ದ ಚಾಲಕನನ್ನು ಪತ್ತೆ ಹಚ್ಚಿರುವ ಮಹದೇವಪುರ ಸಂಚಾರ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೆ.ಆರ್.ಪುರ ನಿವಾಸಿ ಶ್ರೀನಿವಾಸ್ (46) ಎಂಬುವರ ವಿರದ್ಧ ಪ್ರಕರಣ ದಾಖಲಾಗಿದೆ.
ಶ್ರೀನಿವಾಸ್ ತಮ್ಮ ಮಹೀಂದ್ರ ಥಾರ್ ಕಾರನ್ನು ಗುರುವಾರ ಬೆಳಗ್ಗೆ 9.45 ರ ಸುಮಾರಿಗೆ ಹೂಡಿ ವೃತ್ತದ ಬಳಿಯ ಪಾದಚಾರಿ ಮಾರ್ಗದಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿದ್ದರು. ಅದರ ವಿಡಿಯೋವನ್ನು ಸೆರೆ ಹಿಡಿದು ನೆಟಿಜನ್ ಎಂಬ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಚಾಲಕ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು.
ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಚಾಲಕನನ್ನು ಪತ್ತೆ ಹಚ್ಚಿ ವಿಚಾರಿಸಿದ್ದಾಗ ತಂದೆಗೆ ಅನಾರೋಗ್ಯವಿದ್ದ ಹಿನ್ನೆಲೆ ಯಲ್ಲಿ ವೇಗವಾಗಿ ಪಾದಚಾರಿ ಮಾರ್ಗದಲ್ಲಿ ತೆರಳಬೇಕಾಯಿತು ಎಂದು ಹೇಳಿದ್ದಾರೆ.
ಶ್ರೀನಿವಾಸ್‌ರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿದ್ದು, ದಂಡ ಪಾವತಿಸಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.