Advertisement

ಬಾಲಕಾರ್ಮಿಕ ಜಾಗೃತಿ ರಥಕ್ಕೆ ಚಾಲನೆ 

01:56 PM Feb 28, 2018 | |

ಕೊಡಿಯಾಲ್‌ಬೈಲ್‌ : ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನ ಸಂಘದ ವತಿಯಿಂದ ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಂಚರಿಸುವ ಜನ ಜಾಗೃತಿ ರಥಕ್ಕೆ ಕಾನೂನು ಸೇವಾ ಪ್ರಾಧಿಕಾರದ ಆವರಣದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

Advertisement

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ. ಎಸ್‌. ಬೀಳಗಿ ಉದ್ಘಾಟಿಸಿದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಮಲ್ಲನಗೌಡ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಎಂ.ಆರ್‌. ಬಲ್ಲಾಳ್‌, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ್‌, ವಿಲ್ಮಾ ಎಲಿಜಬೆತ್‌ ತಾವ್ರೋ, ಕೃಷ್ಣಮೂರ್ತಿ, ಬಾಲಕಾರ್ಮಿಕ ಯೋಜನ ನಿರ್ದೇಶಕ ಶ್ರೀನಿವಾಸ ನಾಯಕ್‌, ಹಿರಿಯ ಕಾರ್ಮಿಕ ನಿರೀಕ್ಷಕರಾದ ಮೇರಿ ಡಯಾಸ್‌, ವೀರೇಂದ್ರ ಕುಂಬಾರ್‌, ಗಣಪತಿ ಹೆಗ್ಡೆ, ರಾಜಶೇಖರ ರೆಡ್ಡಿ ಉಪಸ್ಥಿತರಿದ್ದರು.

ಜಾಗೃತಿ ರಥವು ಫೆ. 27ರಿಂದ ಮಾ. 12ರ ವರೆಗೆ ಜಿಲ್ಲೆಯಾದ್ಯಂತ ಸಂಚರಿಸಿ ಸಾರ್ವಜನಿಕರಲ್ಲಿ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

ತುರ್ತು ಸಂಖ್ಯೆಗಳು
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‌ಲೆ„ನ್‌: 1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನ ಸಂಘದ ದೂರವಾಣಿ ಸಂಖ್ಯೆ 2433131ಗೆ ಕರೆ ಮಾಡಿ ತಿಳಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next