Advertisement

Arrested: ನಗರದಲ್ಲಿ ನಂಬರ್‌ ಪ್ಲೇಟ್‌ ಮರೆಮಾಚಿ ವಾಹನ ಚಾಲನೆ; ಬೈಕ್‌ ಸವಾರನ ಬಂಧನ

11:30 AM Jul 28, 2024 | Team Udayavani |

ಬೆಂಗಳೂರು: ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ಚಲಾಯಿಸುತ್ತಿದ್ದ ಸವಾರನನ್ನು ವೈಟ್‌ಫೀಲ್ಡ್‌ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಡುಗೋಡಿಯ ಕೇಶವ (45) ಬಂಧಿತ. ಆತನಿಂದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಜು.24ರಂದು ಕಾಡುಗೋಡಿಯ ಬಸ್‌ ನಿಲ್ದಾಣದ ಬಳಿ ಸವಾರನೊಬ್ಬ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗಿದ್ದ. ಅದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಆ ದ್ವಿಚಕ್ರ ವಾಹನದ ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ನಗರ ಸಂಚಾರ ಪೊಲೀಸರಿಗೆ ಟ್ಯಾಗ್‌ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದರು. ಈ ದೂರಿನ ಮೇರೆಗೆ ಆ ದ್ವಿಚಕ್ರ ವಾಹನ ಮತ್ತು ಸವಾರನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ.

ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next