Advertisement

ನದಿ ಪಾತ್ರದಲ್ಲಿ ಬೆಳೆಹಾನಿ ಪರಿಶೀಲನೆಗೆ ಡ್ರೋನ್‌ ನೆರವು

06:35 AM Aug 24, 2018 | |

ಬೆಂಗಳೂರು: ಅಣೆಕಟ್ಟೆಗಳ ಹಿನ್ನೀರು ಮತ್ತು ಅವುಗಳಿಂದ ಹರಿದು ಹೋಗುವ ನೀರಿನಿಂದ ಆಗುವ ಹಾನಿಗಳ ಬಗ್ಗೆ ಇದೇ ಮೊದಲ ಬಾರಿಗೆ ಜಲ ಸಂಪನ್ಮೂಲ ಇಲಾಖೆ ವತಿಯಿಂದ ಡ್ರೋನ್‌ ನೆರವಿನೊಂದಿಗೆ ವಿಡಿಯೋ ಮತ್ತು ಫೋಟೋ ಚಿತ್ರೀಕರಣ ಮಾಡಿಕೊಳ್ಳಲಾಗುತ್ತಿದೆ.

Advertisement

ಇದರಿಂದಾಗಿ ಅಣೆಕಟ್ಟೆಯ ಹಿನ್ನೀರು ಮತ್ತು ಜಲಾಶಯದಿಂದ ಹರಿಯುತ್ತಿರುವ ಭಾರೀ ಪ್ರಮಾಣದ ನೀರಿನಿಂದ ರೈತರ ಭೂಮಿ, ಬೆಳೆ ನಾಶವಾದರೆ ಅದನ್ನು ಪತ್ತೆ ಹಚ್ಚುವ ಕೆಲಸ ಆಗಲಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವುದೂ ಸುಲಭವಾಗಲಿದೆ.

ವಿಕಾಸಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಜಲಾಶಯಗಳ ನೀರಿನಿಂದ ರೈತರಿಗೆ ತೊಂದರೆಯಾದಾಗ ಪರಿಹಾರ ನೀಡುವಲ್ಲಿ ಮೋಸವಾಗ ಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿ ದಂತೆ ಮೊದಲು ನಕ್ಷೆ ಇದ್ದಿದ್ದನ್ನು ಈಗ ದಾಖಲೆ ಮಾಡಿಕೊಳ್ಳಲಾಗುತ್ತಿದೆ. ಹಿನ್ನೀರು ಕಡಿಮೆ ಯಾದ ಬಳಿಕ ಆ ಪ್ರದೇಶದಲ್ಲಿ ಯಾವುದೇ ಚಟುವಟಿಕೆ ಮಾಡದಿರುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೆರೆ ತುಂಬಿಸುವ ಕಾರ್ಯ: ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ.ಅಲ್ಲದೆ, ನದಿಗಳಲ್ಲೂ ನೀರಿನ ಪ್ರಮಾಣ ಹೇರಳವಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಕೆರೆ ತುಂಬಿಸುವ ಕಾರ್ಯ ಕೈಗೊಳ್ಳಲಾಗಿದೆ. ಇದಕ್ಕೆ ಅನುಕೂಲವಾಗುವಂತೆ ಎಲ್ಲಾ ಕಣಿವೆ, ನಾಲೆಗಳಿಗೆ ನೀರು ಬಿಡುವಂತೆ ಸೂಚಿಸಲಾಗಿದೆ. ಕೆಲವೆಡೆ ಕಣಿವೆ ಅಥವಾ ಕಾಲುವೆಗಳಲ್ಲಿ ಹೂಳು ತುಂಬಿರುವ ಕಾರಣ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.ಇಂತಹ ಕಡೆಗಳಲ್ಲಿ ಕೂಡಲೇ ಅವುಗಳ ಹೂಳು ತೆಗೆದು ಕೆರೆಗಳಿಗೆ ನೀರು ಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಸೈಬರ್‌ ಕ್ರೈಂ ಪೊಲೀಸರಿಂದ ತನಿಖೆ
ಬೆಂಗಳೂರು:
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವುದರಿಂದ ಅಣೆಕಟ್ಟೆಗಳಿಗೆ ಹಾನಿಯಾಗಿದೆ ಎಂಬ ವದಂತಿಯನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಸೈಬರ್‌ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಯಾದ ಮಳೆಯಿಂದಾಗಿ ಅಣೆಕಟ್ಟೆಗಳು ಹಾನಿಗೊಳಗಾಗಿವೆ ಎಂಬ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಇದು ಕೇವಲ ವದಂತಿಯಾಗಿದ್ದು, ಜನ ಆತಂಕಪಡುವ ಅಗತ್ಯವಿಲ್ಲ. ಆದರೂ, ಇಂತಹ ಪ್ರಕರಣಗಳು ಮುಂದುವರಿಯದಂತೆ ನೋಡಿ ಕೊಳ್ಳಲು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿ ಸುಳ್ಳು ಮಾಹಿತಿ ಹರಡುತ್ತಿ ರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದು, ಅವರು ತನಿಖೆ ಆರಂಭಿಸಿದ್ದಾರೆ ಎಂದು ಸಚಿವ ಶಿವಕುಮಾರ್‌ ತಿಳಿಸಿದರು.

Advertisement

ರಾಜ್ಯದ ಎಲ್ಲಾ ಅಣೆಕಟ್ಟೆಗಳು ಸುಭದ್ರವಾಗಿವೆ. ಆದರೂ ವದಂತಿಗಳನ್ನು ಆಧರಿಸಿ ಮುಖ್ಯಮಂತ್ರಿಗಳು ವರದಿ ಕೇಳಿದ್ದು, ಈ ಬಗ್ಗೆ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ ಅಣೆಕಟ್ಟೆಗಳ ಪರಿಶೀಲನೆ ಕಾರ್ಯ ಮುಗಿದಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗಲಿದೆ. ಅಲ್ಲದೆ, ಅಣೆಕಟ್ಟೆಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡುತ್ತಿ ರುವುದರಿಂದ ಅದರ ಕೆಳಭಾಗದ ಸೇತುವೆಗಳಿಗೆ ಹಾನಿಯಾಗದಂತೆ ಭಾರೀ ವಾಹನಗಳ ಸಂಚಾರವನ್ನು ಸೇತುವೆಗಳಲ್ಲಿ ನಿಷೇಧಿಸಲಾಗಿದೆ. ಅಲ್ಲದೆ, ಕೆರೆಕೋಡಿ ಗಳ ಬಳಿಯೂ ವಾಹನಗಳನ್ನು ಬಿಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

724 ನರ್ಸ್‌ಗಳ ಹುದ್ದೆಗೆ ನೇರ ನೇಮಕಾತಿ
ಬೆಂಗಳೂರು:
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನರ್ಸ್‌ಗಳ ಕೊರತೆ ತೀವ್ರವಾಗಿ ಬಾಧಿಸುತ್ತಿರುವುದರಿಂದ ಮೊದಲ ಹಂತದಲ್ಲಿ 724 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಆಸ್ಪತ್ರೆಗಳಲ್ಲಿ ಸಾವಿರಕ್ಕೂ ಹೆಚ್ಚು ನರ್ಸ್‌ಗಳ ಕೊರತೆ ಇದೆ. ಹೀಗಾಗಿ, ತಕ್ಷಣಕ್ಕೆ 724 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಶೀಘ್ರವೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಪ್ರಕೃತಿ ವಿಕೋಪ ಎದುರಿಸುತ್ತಿರುವ ಕೊಡಗು ಜಿಲ್ಲೆಗೆ ಈಗಾಗಲೇ ವೈದ್ಯರ ತಂಡಗಳು ತೆರಳಿದ್ದು, ಅಲ್ಲಿ ಕೆಲಸ ಮಾಡುತ್ತಿವೆ. ಜತೆಗೆ, ತುರ್ತು ಸೇವೆ ಒದಗಿಸಲು ಸಜ್ಜಾಗಿರುವಂತೆ ಇಲಾಖೆಯ ವೈದ್ಯರ ತಂಡಕ್ಕೆ ಸೂಚಿಸಲಾಗಿತ್ತು, ಅಗತ್ಯ ಬಿದ್ದರೆ ಕಳುಹಿಸಲಾಗುವುದು. ಅವಶ್ಯಕತೆ ಇದ್ದರೆ ಕೊಡಗಿಗೆ ತೆರಳಲು ಸಿದಟಛಿರಾಗಿರುವಂತೆ ಖಾಸಗಿ ವೈದ್ಯರಿಗೂ ಸೂಚಿಸಲಾಗಿದೆ ಎಂದು ಹೇಳಿದರು.

ಮಹದಾಯಿ ನ್ಯಾಯಾಧೀಕರಣ ನೀಡಿರುವ ತೀರ್ಪು ರಾಜ್ಯಕ್ಕೆ ಅನ್ಯಾಯವಾಗಿದ್ದು, ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲಾಗುವು
ದು. ಕುಡಿಯುವ ನೀರು ಮತ್ತು ವಿದ್ಯುತ್‌ ಉತ್ಪಾದನೆಗೆ ರಾಜ್ಯವು ಕೇಳಿರುವ ನೀರಿನ ಪ್ರಮಾಣಕ್ಕಿಂತ ಕಡಿಮೆ ನೀಡಲಾಗಿದೆ.
ವಿದ್ಯುತ್‌ ಉತ್ಪಾದನೆ ನಂತರದ ಹೆಚ್ಚುವರಿ ನೀರು ಗೋವಾಕ್ಕೆ ಹರಿದು ಹೋಗುತ್ತದೆ. ಈ ಬಗ್ಗೆ ಗೋವಾ ಸರ್ಕಾರಕ್ಕೆ ಸಿಎಂ ಪತ್ರ ಬರೆಯಲಿದ್ದಾರೆ.

– ಡಿ.ಕೆ.ಶಿವಕುಮಾರ್‌, ಜಲ ಸಂಪನ್ಮೂಲ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next