Advertisement

ಮಧ್ಯಪ್ರದೇಶದ 5 ಕಡೆ ಡ್ರೋನ್‌ ತಂತ್ರಜ್ಞಾನ ಶಾಲೆ: ಜ್ಯೋತಿರಾಧಿತ್ಯ ಸಿಂಧಿಯಾ

09:11 PM Dec 12, 2021 | Team Udayavani |

ಗ್ವಾಲಿಯರ್‌: ಮಧ್ಯಪ್ರದೇಶದ ಐದು ನಗರಗಳಲ್ಲಿ ಡ್ರೋನ್‌ ಆಧಾರಿತ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

Advertisement

ಗ್ವಾಲಿಯರ್‌ನಲ್ಲಿ ಮಾತನಾಡಿದ ಅವರು, ಯುವ ಜನರಿಗೆ ಹೊಸ ರೀತಿಯ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಿ, ಅವರಿಗೆ ಉದ್ಯೋಗಾವಕಾಶಗಳನ್ನು ನೀಡುವ ಬಗ್ಗೆ ಆಸಕ್ತಿ ಹೊಂದಿದೆ ಎಂದು ತಿಳಿಸಿದ್ದಾರೆ.

ಗ್ವಾಲಿಯರ್‌, ಭೋಪಾಲ, ಇಂದೋರ್‌, ಜಬಲ್ಪುರ, ಸಾತ್ನಾಗಳಲ್ಲಿ ಹೊಸ ಮಾದರಿಯ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಹೆಲಿಕಾಪ್ಟರ್ ಪತನ: ಪ್ರತ್ಯಕ್ಷದರ್ಶಿಯ ಮೊಬೈಲ್ ಫೊರೆನ್ಸಿಕ್ ಪರೀಕ್ಷೆಗೆ

ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ತಂತ್ರಜ್ಞಾನ ಬಳಕೆ ಮಾಡಬೇಕು ಎಂಬ ಆಶಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next