ದಾವಣಗೆರೆ: 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಅವರ 150 ಪ್ಲಸ್ ಗುರಿ ಈಡೇರಲು ತತ್‌ಕ್ಷಣದಿಂದಲೇ ಚುನಾವಣೆಗೆ ಪಕ್ಷದ ಸಜ್ಜಾಗಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಬುಧವಾರ ಜಿಲ್ಲಾ ಕಚೇರಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಒಂದು ವರ್ಷ ಇದೆ. ಮುಖಂಡರು, ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷವನ್ನು ಇನ್ನಷ್ಟು ಸಂಘಟಿಸಿ, ಚುನಾವಣೆ ಗೆಲ್ಲಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಕಳೆದ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ಹೋಳಾಗಿದ್ದರಿಂದ ಸೋಲು ಕಾಣಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ದೊರೆಯಲಿ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು. ಸಣ್ಣ ಪುಟ್ಟ ವೈಮನಸ್ಸು ಇದ್ದಲ್ಲಿ ಎಲ್ಲವನ್ನೂ ಬದಿಗಿರಿಸಿ ಪಕ್ಷ ಅಧಿಕಾರಕ್ಕೆ ಬರಲು ಕಾಯೋನ್ಮುಖರಾಗಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷ ಜಿ.ಎಂ. ರುದ್ರಗೌಡ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 4 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಬರದ ಪರಿಸ್ಥಿತಿಯಲ್ಲಿ ರೈತರು, ಜನ ಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಎಲ್ಲಾ 8 ಕ್ಷೇತ್ರದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು.
ದಕ್ಷಿಣ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್, ಮುಖಂಡರಾದ ವೈ. ಮಲ್ಲೇಶ್, ಪ್ರಭು ಕಲುºರ್ಗಿ, ಎಲ್.ಡಿ. ಗೋಣೆಪ್ಪ, ರಮೇಶನಾಯ್ಕ, ಎನ್. ರಾಜಶೇಖರ್, ಶಂಕರಗೌಡ ಬಿರಾದಾರ್, ಟಿಂಕರ್ ಮಂಜಣ್ಣ, ಆರ್. ಪ್ರತಾಪ್ ಇದ್ದರು.