ಬಳ್ಳಾರಿ: ಜೋಳ ಖರೀದಿಗೆ ವಿಧಿಸಿರುವ ಮಿತಿಯನ್ನು ಕೈಬಿಟ್ಟು ರೈತರು ಬೆಳೆದ ಎಲ್ಲ ಬೆಳೆಯನ್ನು ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಇತ್ತೀಚೆಗೆ ಅಕಾಲಿಕವಾಗಿ ಸುರಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಬಳ್ಳಾರಿ ಜಿಲ್ಲೆಯಲ್ಲಿ ಭತ್ತ, ಮೆಣಸಿನಕಾಯಿ ಹಾಗೂ ಇತರೆ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಇಂಥ ಅನಿರೀಕ್ಷಿತ ಪ್ರಾಕೃತಿಕ ವಿಕೋಪಗಳಿಂದ ಹಲವುಕಷ್ಟ-ನಷ್ಟಗಳನ್ನು ಅನುಭವಿಸಿ ತಿಂಗಳುಗಟ್ಟಲೇ ದುಡಿದು ಜೋಳದ ಬೆಳೆಯನ್ನು ಬೆಳೆದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಂಬಲ ಬೆಲೆಯೊಂದಿಗೆಜೋಳ ಮತ್ತು ಭತ್ತದ ಖರೀದಿ ವಿಚಾರದಲ್ಲಿ ಈ ವರ್ಷದ ನಡಾವಳಿಗಳಿಂದ ರೈತರಿಗೆ ತೊಂದರೆಯಾಗಿದೆ.
ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಜೋಳ ಹಾಗೂ ಪ್ರತಿ ರೈತನಿಂದ ಗರಿಷ್ಠ 40 ಕ್ವಿಂಟಲ್ ಭತ್ತ ಖರೀದಿಸುತ್ತೇವೆ ಎಂಬ ಸರ್ಕಾರದ ನಿಯಮಗಳಿಂದಾಗಿ ರೈತ ಸಮುದಾಯಕ್ಕೆ ತೀವ್ರ ತೊಂದರೆಯಾಗಿದೆ ಎಂದು ಮನವಿಯಲ್ಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಆರ್. ಮಾಧವರೆಡ್ಡಿ, ತಾಲ್ಲೂಕು ಅಧ್ಯಕ್ಷ ಲೇಪಾಕ್ಷಿ ತಿಳಿಸಿದ್ದಾರೆ. ಕೇಂದ್ರದ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ ಗೆ 300 ರೂಪಾಯಿ ಪ್ರೋತ್ಸಾಹ ಧನ ನೀಡಬೇಕು.
ಪ್ರತಿ ರೈತರಿಂದ ಕನಿಷ್ಠ 40 ಕ್ವಿಂಟಲ್ ಭತ್ತ ಖರೀದಿ ಮಿತಿಯನ್ನು ಕೈಬಿಟ್ಟು , ಗರಿಷ್ಠ 150 ಕ್ವಿಂಟಲ್ ಖರೀದಿ ಮಾಡಬೇಕು ಸೇರಿದಂತೆ ಇನ್ನೂಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸರೆಡ್ಡಿ, ಲಕೀÒ ¾ಕಾಂತರೆಡ್ಡಿ, ಅನಿಲ್ ಕುಮಾರ್, ಸೂರ್ಯ ಪ್ರಕಾ ಶ್, ಬಸವರಾಜಸ್ವಾಮಿ, ವೀರಭದ್ರ, ಪ್ರಭು ಇದ್ದರು.