Advertisement

Drought Relief: ಮತ್ತೆ ಕೇಂದ್ರದ ವಿರುದ್ಧ ಸಿಎಂ ಗುಡುಗು

11:08 PM Apr 08, 2024 | Team Udayavani |

ಬೆಂಗಳೂರು: ಬರಪರಿಹಾರ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಜಟಾಪಟಿ ಮುಂದುವರಿದಿದೆ.

Advertisement

ರಾಜ್ಯಕ್ಕೆ ಬರ ಪರಿಹಾರ ವಿಚಾರವಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದಾರೆ.

ಕರ್ನಾಟಕಕ್ಕೆ ನ್ಯಾಯ ಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರವು ಸುಪ್ರೀಂಕೋರ್ಟ್‌ಗೂ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಕುಟುಕಿದ್ದಾರೆ.

ಬರ ಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಮಧ್ಯಪ್ರವೇಶಿಸದಂತೆ ಆಯೋಗಕ್ಕೆ ಮನವಿ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಲ್ಲಿ ವಿಳಂಬವಾಗಿರುವುದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಒಪ್ಪಿಕೊಂಡಿದ್ದಾರೆ. ಆದರೆ ನಾಲ್ಕೈದು ತಿಂಗಳ ಹಿಂದೆಯೇ ಈ ಸಂಬಂಧ ರಾಜ್ಯ ಸರಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು. ಅದರಂತೆ ಬರ ಅಧ್ಯಯನ ತಂಡ ಕೂಡ ರಾಜ್ಯಕ್ಕೆ ಭೇಟಿ ನೀಡಿತ್ತು. ಇದನ್ನು ಸಚಿವರು ಮರೆತಂತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀಕ್ಷ್ಣವಾಗಿ ಹೇಳಿದರು.

Advertisement

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬರ ಪರಿಹಾರ ವಿಚಾರವಾಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ನಾವು ಕೋರ್ಟ್‌ ಮೊರೆಹೋಗಿದ್ದೇವೆ. ಇದಲ್ಲದೆ, ಬರ ಪರಿಹಾರ ವಿತರಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಪಕ್ಷದಿಂದ ಕೂಡ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದು ರಾಜ್ಯಕ್ಕೆ ಬರಬೇಕಾದ ಅನುದಾನ, ಪರಿಹಾರ ಬಾಕಿಯಿದೆ ಎಂದು ತಿಳಿಸಿರುವುದಾಗಿ ಮಾಹಿತಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next