Advertisement
ಕರ್ನಾಟಕ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ 3 ಪ್ರತ್ಯೇಕ ಪೋಸ್ಟ್‌ಗಳನ್ನು ಹಾಕಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದಂತೆಯೂ ಆಗಬೇಕು, ಕರ್ನಾಟಕಕ್ಕೆ ಅನ್ಯಾಯ ಆದಂತೆಯೂ ಇರಬೇಕು ಎಂಬ ಚಾಣಾಕ್ಷತನವನ್ನು ಕೇಂದ್ರ ಸರಕಾರ ತೋರಿದೆ. ಬರದಿಂದ ಕರ್ನಾಟಕಕ್ಕೆ 35 ಸಾವಿರ ಕೋಟಿ ರೂ. ಅಧಿಕ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ನಮ್ಮ ಸರಕಾರ ಪ್ರಸ್ತಾವನೆ ಸಲ್ಲಿಸಿದ್ದು 18,171 ಕೋಟಿ ರೂ. ಆದರೆ, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ ಕೇವಲ 3,454 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿ ಕರ್ನಾಟಕ ದ್ವೇಷವನ್ನು ಮುಂದುವರಿಸಿದೆ. ನ್ಯಾಯಯುತ ಪರಿಹಾರಕ್ಕಾಗಿ ಮತ್ತೂಮ್ಮೆ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆ ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದೆ.
ಹಾವೇರಿ: ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರಕಾರ ರಾಜಕಾರಣ ಮಾಡುವುದನ್ನು ಬಿಡಬೇಕು. ಚುನಾವಣ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೇಂದ್ರ ಸರಕಾರ ಚುನಾವಣ ಆಯೋಗದ ಅನುಮತಿ ಪಡೆದು ರಾಜ್ಯಕ್ಕೆ ಬರ ಪರಿಹಾರ ನೀಡಿದ್ದು, ರಾಜ್ಯದ ರೈತರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರುವ ಕಾಳಜಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Related Articles
Advertisement
ಕೇಂದ್ರವನ್ನು ದೂಷಿಸಿ ಜನರ ದಾರಿ ತಪ್ಪಿಸುತ್ತಿರುವ ರಾಜ್ಯ ಸರಕಾರ: ಯಡಿಯೂರಪ್ಪಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿ ಸುವ ಬದಲು ಕೇಂದ್ರವನ್ನು ದೂಷಿಸಿ ಜನರ ದಾರಿ ತಪ್ಪಿಸುತ್ತಿದೆ. ಜನರ ತೆರಿಗೆ ಹಣ ಎಲ್ಲಿ ಹೋಯ್ತು? ಈ ಸರಕಾರದಿಂದ ಲೂಟಿ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಪಾದಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರಕಾರ ತನ್ನ ಪಾಲನ್ನು ರಾಜ್ಯಗಳಿಗೆ ಕೊಟ್ಟೇ ಕೊಡುತ್ತದೆ. ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ತನ್ನ ಪಾಲನ್ನು ಖರ್ಚು ಮಾಡದೇ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಇದು ರಾಜ್ಯ ಸರಕಾರ ದಿವಾಳಿ ಆಗಿರುವ ಲಕ್ಷಣವಾಗಿದೆ ಎಂದರು. ನಾವು ಕೊಟ್ಟಂತೆ ರೈತರಿಗೆ
ಡಬಲ್ ಬರ ಪರಿಹಾರ ಕೊಡಲಿ
ಬೆಂಗಳೂರು: ಬರಗಾಲದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಸಾಮರ್ಥ್ಯವಿದ್ದರೆ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಕೊಟ್ಟಂತೆ ಡಬಲ್ ಪರಿಹಾರ ನೀಡಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರದ ಖಜಾನೆ ಖಾಲಿಯಾಗಿದೆ. ಬರ ಪರಿಹಾರ ಸಂಬಂಧ ಸಕಾಲದಲ್ಲಿ ಕೇಂದ್ರಕ್ಕೆ ಮಾಹಿತಿ ನೀಡಲು ಸರಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಬರ ಹಾಗೂ ಪ್ರಕೃತಿ ವಿಕೋಪಕ್ಕೆ ಪರಿಹಾರ ನೀಡಲು ಚುನಾವಣ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ. ಇದರಲ್ಲಿ ಕಾಂಗ್ರೆಸ್‌ನ ಹೋರಾಟ ಏನೂ ಇಲ್ಲ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ಸರಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು, ಡಿಬಿಟಿ ಮೂಲಕವೇ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.