Advertisement

ಬರ ಪರಿಹಾರ ತಾರತಮ್ಯ: ಮೋದಿಗೆ ಸಿದ್ದು ಪತ್ರ

05:35 AM Jul 20, 2017 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗೆ ಎಸ್‌ಡಿಆರ್‌ಎಫ್ ನಿಧಿಯಿಂದ ಕರ್ನಾಟಕ ರಾಜ್ಯಕ್ಕೆ ಬರುವ ಹಣ ತೀರಾ ಕಡಿಮೆ ಇದೆ. ಬರ ಎದುರಿಸುವ ಮಹಾರಾಷ್ಟ್ರ, ಆಂಧ್ರಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಮೊತ್ತ ಗಮನಿಸಿದರೆ, ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Advertisement

ಇದಕ್ಕೆ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವರು ಉತ್ತರ ನೀಡಿದ್ದು, 13ನೇ ಹಣಕಾಸು ಆಯೋಗದ ಪ್ರಕಾರ 889 ಕೋಟಿ ರೂ. ನೀಡಲಾಗುತ್ತಿತ್ತು. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 1527 ಕೋಟಿ ರೂ. ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

6 ವರ್ಷದಲ್ಲಿ ಕರ್ನಾಟಕ ನಿರಂತರ ಬರಗಾಲಕ್ಕೆ ತುತ್ತಾಗುತ್ತಿದೆ. ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್
ನಿಯಮದ ಪ್ರಕಾರ ವಾರ್ಷಿಕ ಕಡಿಮೆ ಪರಿಹಾರ ನೀಡಿದ್ದು, ರಾಜ್ಯ ಸರ್ಕಾರವೂ ಸ್ವಂತ ಖಜಾನೆಯಿಂದ ಹಣ ಬಿಡುಗಡೆ ಮಾಡಿ ಪರಿಹಾರ ಕ್ರಮ ಕೈಗೊಂಡಿದೆ. ಪ್ರತಿ ವರ್ಷ ಬರ ಪರಿಹಾರಕ್ಕೆ ಸರಾಸರಿ 1259 ಕೋಟಿ ರೂ.ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ದಿಂದ 1990 ರಿಂದ 2005 ರ ವರೆಗೆ ಒಟ್ಟು
ಹಣದಲ್ಲಿ ಶೇ.3.2 ರಷ್ಟು ಕರ್ನಾಟಕಕ್ಕೆ ನೀಡಲಾಗುತ್ತಿತ್ತು. ಆದರೆ, 2015-20 ರವರೆಗೆ ಶೇ.2.4ರಷ್ಟು ಮಾತ್ರ ಕರ್ನಾಟಕಕ್ಕೆ ಮೀಸಲಿಡಲಾಗಿದೆ.

ಇದರಿಂದ ರಾಜ್ಯಕ್ಕೆ ಅನ್ಯಾಯವಾದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next