Advertisement

ಬರ ಪರಿಸ್ಥಿತಿ ಮನವರಿಕೆ: ಶಿವಮೂರ್ತಿ

08:28 AM Feb 28, 2019 | |

ದಾವಣಗೆರೆ: ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಸಮಗ್ರವಾಗಿ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್‌.ಜಿ.ಶಿವಮೂರ್ತಿ ಹೇಳಿದ್ದಾರೆ.

Advertisement

ಬುಧವಾರ ಜಿಲ್ಲೆಯ ದಾವಣಗೆರೆ ಹಾಗೂ ಜಗಳೂರು ತಾಲೂಕಿನಲ್ಲಿ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ವೇಳೆ ಜಗಳೂರಿನ ರಂಗಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಿಂಗಾರಲ್ಲಿ ಕೃಷಿ, ತೋಟಗಾರಿಕೆ ಬೆಳೆ ಹಾನಿ ಹಾಗೂ ಅನಾವೃಷ್ಟಿಯಿಂದಾಗಿ ಹಳ್ಳಿಗಳಲ್ಲಿ ಜನ-ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಅತೀವ ತೊಂದರೆ ಬಗ್ಗೆ ತಂಡದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ರಂಗಾಪುರ ಗ್ರಾಮದಲ್ಲಿ ಟ್ಯಾಂಕರ್‌ ಮೂಲಕ ತಂದು ನೀರು ಶುದ್ಧೀಕರಿಸಿ, ಪೂರೈಸಲಾಗುತ್ತಿದ್ದು, ಇದೇ ರೀತಿ ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಅಂಕಿ-ಅಂಶಗಳ ಮೂಲಕ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಮೇಲಾಗಿ ಫಸಲ್‌ ಬಿಮಾ ಯೋಜನೆ ತಮಗೆ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ರೈತರು ದೂರಿರುವ ಬಗ್ಗೆಯೂ ತಂಡದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಸಂಪೂರ್ಣ ಚಿತ್ರಣವನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ತಂಡ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಭೇಟಿ ನೀಡಿ, ಅಧ್ಯಯನ ನಡೆಸಿದ ನಂತರ ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸ್ಪಂದಿಸುವ ನಂಬಿಕೆ ಇದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next