Advertisement
ಮಳೆ ಕೊರತೆಯಿಂದ ರಾಜ್ಯ ಸರ್ಕಾರ ಜಿಲ್ಲೆ ನಾಲ್ಕು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಈ ನಿಟ್ಟಿನಲ್ಲಿ ಬೆಂ. ಗ್ರಾಮಾಂತರ ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡವು ಜಿಲ್ಲೆಯಲ್ಲಿ ಕೆಲವು ಆಯ್ದ ಗ್ರಾಮಗಳಿಗೆ ಮಾತ್ರ ಭೇಟಿ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನಿರ್ದಿಷ್ಟ ಮತ್ತು ನೈಜ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಹೆಚ್ಚಿನ ಪರಿಹಾರವನ್ನು ನೀಡುವಂತಾಗಬೇಕು. ಅನ್ನದಾತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ರೈತರು ಮನವಿ ಮಾಡಿದ್ದಾರೆ.
Related Articles
Advertisement
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಮಾತನಾಡಿ ಜಿಲ್ಲೆಯಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ ಕುಂಠಿತವಾಗಿದೆ. ಎಂದು ಹೇಳಿದರು.
ವಿಶ್ವನಾಥಪುರದಲ್ಲಿ ರೈತರು ಅಂತರ್ಜಲ ಕುಸಿತ, ಕೊಳವೆ ಬಾವಿ ಪರಿಸ್ಥಿತಿ ವಿವರಿಸಿದರು. ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಬೆಳೆಹಾನಿ, ಬೆಳೆವಿಮೆ ಪಾವತಿ, ಬೀಜ-ಗೊಬ್ಬರ, ಕೃಷಿ ಕೂಲಿಕಾರರ ಖರ್ಚು-ವೆಚ್ಚಗಳ ಬಗ್ಗೆ ಸ್ವತಃ ರೈತರಿಂದಲೇ ಮಾಹಿತಿಯನ್ನು ಪಡೆದುಕೊಂಡರು. ಸಾಮಾಜಿಕ ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್, ಡಿವೈಎಸ್ಪಿ ರವಿ, ಉಪವಿಭಾಗಾಧಿಕಾರಿ ಶ್ರೀನಿವಾಸ, ಜಿಪಂ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪ ನಿರ್ದೇಶಕಿ ವಿನುತಾ, ತೊಟಗಾರಿಕೆ ಉಪ ನಿರ್ದೇಶಕ ಗುಣವಂತ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್ , ತಹಶೀಲ್ದಾರ್ ಶಿವರಾಜ್, ತಾಪಂ ಇಒ ಶ್ರೀನಾಥ್‌ಗೌಡ, ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಸುಶೀಲಮ್ಮ, ತಾಲೂಕು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಇತರರಿದ್ದರು.
ಜಿಲ್ಲೆಯಲ್ಲಿ 49559 ಹೆಕ್ಟೇರ್ ಬೆಳೆಹಾನಿ: ಜಿಲ್ಲೆಯಲ್ಲಿ ಮಳೆಕೊರತೆಯಿಂದ 49559.57 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಕುರಿತು ಸಮಗ್ರ ಮಾಹಿತಿ ಹಾಗೂ ಛಾಯಾಚಿತ್ರಗಳ ಮೂಲಕ ಪ್ರಾತ್ಯಕ್ಷಿಕೆ ನೀಡಲಾಗಿದೆ. ವಾಸ್ತವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಅಪಾರ ಬೆಳೆಹಾನಿಯಾಗಿದೆ. ಆದರೆ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ 85 ಕೋಟಿ ಆಗಲಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ತಿಳಿಸಿದರು. ರಾಗಿ 46003.44 ಹೆಕ್ಟೇರ್, ಮುಸುಕಿನ ಜೋಳ 3477.68 ಹೆಕ್ಟೇರ್, ತೊಗರಿ 68.95 ಹೆಕ್ಟೇರ್, ನೆಲಗಡಲೆ 9.50 ಹೆಕ್ಟೇರ್ ಸೇರಿದಂತೆ ಒಟ್ಟು 49559.57 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬಗೆಯ ಬೆಳೆಗಳು ಹಾನಿಯಾಗಿರುತ್ತವೆ ಎಂದು ತಿಳಿಸಿದರು.
ಮಳೆ ಇಲ್ಲದೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕೊಳವೆ ಬಾವಿ ಬತ್ತಿ ಹೋಗಿದೆ. ರಾಗಿ ಬೆಳೆಯುತ್ತಿದ್ದೇವೆ. ರಾಗಿಗೆ ಬೀಜ ಬಿತ್ತನೆ ರಸಗೊಬ್ಬರ ಸೇರಿದಂತೆ ಒಂದು ಎಕರೆಗೆ 30,000 ರೂ. – 40,000 ರೂ. ಖರ್ಚು ಮಾಡಲಾಗಿದೆ. ಮಳೆ ಕೈಕೊಟ್ಟಿರುವುದರಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸರ್ಕಾರ ಸ್ಪಂದಿಸಬೇಕು. -ಪ್ರಕಾಶ್, ಅವತಿ ಗ್ರಾಮದ ರೈತ