Advertisement
ತುಮಕೂರು, ಗುಬ್ಬಿ ಹಾಗೂ ಶಿರಾ ತಾಲೂಕುಗಳಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾಗೇಶ್ ನೇತೃತ್ವದ ತಂಡ ಪ್ರವಾಸ ಕೈಗೊಂಡು, ಬರ ಪರಿಶೀಲಿಸಿತು. ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಬೆಳೆ ನಷ್ಟದ ಮಾಹಿತಿ ಪಡೆದುಕೊಂಡಿತು. ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ತಂಡ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿ, ಹೊನ್ನಾಳಿ ತಾಲೂಕಿನ ಮಾದನಬಾವಿ ಇತರೆಡೆ ಬರ ಪರಿಸ್ಥಿತಿ ಅಧ್ಯಯನ ನಡೆಸಿತು.
Related Articles
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ಬಿಜೆಪಿ ಮುಖಂಡರ ತಂಡ ಸೋಮವಾರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿ, ಹೊನ್ನಾಳಿ ತಾಲೂಕಿನ ಮಾದನಬಾವಿ ಇತರೆಡೆ ಬರ ಪರಿಸ್ಥಿತಿ ಅಧ್ಯಯನ ನಡೆಸಿತು.
Advertisement
ತಂಡದ ಸದಸ್ಯರು ಹರಿಹರ ತಾಲೂಕಿನ ಬೆಳ್ಳೊಡಿ ಗ್ರಾಮದ ಹಲವಾರು ಹೊಲಗಳಲ್ಲಿ ಒಣಗಿ ಹೋಗಿರುವ ಮೆಕ್ಕೆಜೋಳ, ಜೋಳ ಇತರ ಬೆಳೆಗಳನ್ನು ವೀಕ್ಷಿಸಿದರು. ರೈತರೊಂದಿಗೆ ಮಳೆಯ ಕೊರತೆ, ಬೆಳೆ ಹಾನಿ, ನಷ್ಟ, ದೊರೆಯಬೇಕಾದ ಪರಿಹಾರ, ಸರಕಾರದಿಂದ ಪರಿಹಾರ ಪಡೆಯುವ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕ ಬಗ್ಗೆ ಕೂಲಂಕಷವಾಗಿ ಚರ್ಚಿಸಿ, ಮಾಹಿತಿ ಪಡೆದರು.ಬರ ಅಧ್ಯಯನ ಪ್ರವಾಸದ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ಅಂತಿಮ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸ ಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ರೈತರ ಪರ ಬಿಜೆಪಿ ಧ್ವನಿ ಎತ್ತಲಿದೆ ಎಂದರು. ಹರಿಹರ ತಾಲೂಕಿನ ಬೆಳ್ಳೊಡಿ ನಂತರ ಹೊನ್ನಾಳಿ ತಾಲೂಕಿನ ಮಾದನಬಾವಿ ಸಹಿತ ಇತರ ಗ್ರಾಮಗಳಲ್ಲಿ ಅಧ್ಯಯನ ನಡೆಸಿತು. ಕುರಿಗಾಹಿಗಳೊಂದಿಗೆ ಸಂವಾದ ನಡೆಸಲಾಯಿತು. ರೈತರೊಂ ದಿಗೆ ಚರ್ಚಿಸಿ, ಹಲವಾರು ಮಾಹಿತಿ ಸಂಗ್ರಹಿಸಿದ ತಂಡ ಬರದಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತು. ಬಿರುಸಿನ ಮಳೆಯ ಕಾರಣ ಜಗಳೂರು ತಾಲೂಕಿನ ಪ್ರವಾಸ ರದ್ದುಗೊಳಿಸಲಾಯಿತು. ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಆಗಮಿಸಿದ್ದ ಕೇಂದ್ರ ತಂಡಕ್ಕೆ ನೈಜ ಸ್ಥಿತಿ ತೋರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಹಸಿರು ಜಾಗವನ್ನು ತೋರಿಸಿದರೆ ಪರಿಹಾರ ನಿರೀಕ್ಷಿಸಲು ಸಾಧ್ಯವೇ?ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು 18 ತಂಡಗಳನ್ನು ರಾಜ್ಯವನ್ನು ಸುತ್ತುತ್ತಿದ್ದು, ರೈತರ ಸಮಸ್ಯೆ, ಕುಡಿಯುವ ನೀರು, ಜಾನುವಾರುಗಳ ಮೇವು ಸಹಿತ ಸಮಗ್ರ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಸಲ್ಲಿಸುತ್ತೇವೆ.
-ಗೋವಿಂದ ಕಾರಜೋಳ, ಮಾಜಿ ಸಚಿವ