Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮ ವಾರ ಬರ ನಿರ್ವಹಣೆಯ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ ಎಲ್ಲಾ 8 ತಾಲೂಕುಗಳೂ ಬರ ಪೀಡಿತ ಎಂದು ಘೋಷಿಸಲಾಗಿದೆ. ಎಲ್ಲಿಯೂ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ವಿಶೇಷ ನಿಗಾವಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅನುದಾನಕ್ಕೆ ಕೊರತೆ ಇಲ್ಲ:ಯಾವುದೇ ಗ್ರಾಮವೂ ಕುಡಿಯುವ ನೀರಿನ ಪೂರೈಕೆಯಿಂದ ವಂಚಿತವಾಗಬಾರದು. ಕೊಳವೆ ಬಾವಿ, ಟ್ಯಾಂಕರ್ ಯಾವ ರೂಪದಲ್ಲಿಯಾದರೂ ಸರಿ ಕುಡಿಯುವ ನೀರು ಒದಗಿಸಿ ಎಂದು ತಾಕೀತು ಮಾಡಿದ ಅವರು, ಈಗಾಗಲೇ ಯೋಜಿಸಲಾಗಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಬಾಕಿ ಬಿಲ್ಗಳನ್ನು ಶೀಘ್ರವಾಗಿ ಪಾವತಿಗಾಗಿ ಸಲ್ಲಿಸಿ ಎಂದರು.
Related Articles
Advertisement
ಶೀಘ್ರದಲ್ಲೇ ಮುಂಗಾರು ಪ್ರಾರಂಭವಾಗಲಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂ ಕಿನ ಹವಾಗುಣಕ್ಕೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ರೈತರಿಗೆ ಬೇಸಾ ಯದ ಬಗ್ಗೆ ಪೂರಕ ಮಾಹಿತಿ, ಸಹಕಾರ ನೀಡಬೇಕು ಎಂದು ನವೀನ್‌ರಾಜ್ ಸಿಂಗ್ ಹೇಳಿದರು.
20 ಸಾವಿರ ಟನ್ ಆಲೂಗಡ್ಡೆ ದಾಸ್ತಾನು: ಈಗಾಗಲೇ ದಾಸ್ತಾನು 20ಸಾವಿರ ಟನ್ ಬಿತ್ತನೆ ಆಲೂಗಡ್ಡೆ ದಾಸ್ತಾನು ಆಗಿರುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಅದನ್ನು ವಿತರಣೆ ಮಾಡಿ ಸಬ್ಸಿಡಿ ಹಣ ಬಿಡುಗಡೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ವಾಗಿ ಸ್ಪಂದಿಸಿ ನೆರವು ನೀಡಿ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರು ಪೂರೈಕೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪುಟ್ಟ ಸ್ವಾಮಿ ಅವರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ವಿವರಿಸಿದರು. ಉಪವಿಭಾಗಾಧಿ ಕಾರಿಗಳಾದ ಎಚ್.ಎಲ್. ನಾಗರಾಜು, ಕವಿತಾ ರಾಜಾರಾಂ, ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.