Advertisement

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

11:20 AM Jul 25, 2022 | Team Udayavani |

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು.

Advertisement

ಇದನ್ನೂ ಓದಿ:ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್

ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು.

21 ಗನ್ ಸೆಲ್ಯೂಟ್ ಗಳ ಬಳಿಕ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಅಲಂಕರಿಸಿದ್ದಾರೆ. ಇದೇ ವೇಳೆ ಮುರ್ಮು ಅವರು 1977ರ ಬಳಿಕ ಜುಲೈ 25ರಂದು ಪ್ರಮಾಣವಚನ ಸ್ವೀಕರಿಸಿದ ಸತತ 10ನೇ ರಾಷ್ಟ್ರಪತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ನೀಲಂ ಸಂಜೀವ ರೆಡ್ಡಿ ಬಳಿಕ ಕೋವಿಂದ್ ವರೆಗೆ ಎಲ್ಲರೂ ಜುಲೈ 25ರಂದೇ ಪ್ರಮಾಣ ವಚನ ಸ್ವೀಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next