Advertisement

ಪ್ರಧಾನಿ ಬಳಿ ಸಿಎಂ ನಿಯೋಗ: ಸುಧಾಕರ್‌

01:58 PM Aug 31, 2020 | Suhan S |

ಶಿಡ್ಲಘಟ್ಟ: ಕೇಂದ್ರ ಸರ್ಕಾರ ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ಕೊಡಬೇಕೆಂದು ಎಲ್ಲಾ ರಾಜ್ಯಗಳಿಂದ ಬೇಡಿಕೆ ಸಲ್ಲಿಕೆಯಾಗಿದೆ. ಜಿಎಸ್‌ಟಿ ಕೋತಾ ಆದರೆ, ರಾಜ್ಯದ ಪ್ರಗತಿಗೆ ಕಷ್ಟವಾಗುತ್ತದೆ. ಹಾಗಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜು ಬೊಮ್ಮಯಿ, ಕೇಂದ್ರ ಸಚಿವರು ಒಳಗೊಂಡಂತೆ ಒಂದು ಉನ್ನತ ಮಟ್ಟದ ನಿಯೋಗ ಪ್ರಧಾನಿ, ವಿತ್ತ ಸಚಿವರನ್ನು ಭೇಟಿಮಾಡಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

Advertisement

ಜಿಲ್ಲೆಯಲ್ಲಿ ಗುರುಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗೋಶಾಲೆ ಆರಂಭಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಎಲ್ಲಾ ರೀತಿಯಲ್ಲಿ ಸಹಕರಿಸುತ್ತಿದೆ. ಜಿಎಸ್‌ಟಿನಲ್ಲಿ ಕರ್ನಾಟಕಕ್ಕೆ ಬರುವ ಪಾಲು ಬರುತ್ತದೆ ಎಂಬ ವಿಶ್ವಾಸ ತಮಗಿದೆ. ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರು ಹಾಗೂ ಗೃಹ ಸಚಿವರು ಪ್ರಧಾನಿ, ವಿತ್ತ ಸಚಿವರಿಗೆ ಮನವರಿಕೆ ಮಾಡಿಕೊಡುತ್ತಾರೆ ಎಂದು ಹೇಳಿದರು.

ಆರ್ಥಿಕ ದುಸ್ಥಿತಿಯಲ್ಲಿ ರಾಜ್ಯದ ಆರ್ಥಿಕ ಶಿಸ್ತು, ಆರ್ಥಿಕ ಪ್ರಗತಿ ಇವೆಲ್ಲೂ ಮುಂದುವರಿಯಲು ಕೇಂದ್ರ ಸರ್ಕಾರ ನಮ್ಮ ಕೆಲಸ ಮಾಡಿಕೊಡಬೇಕಾಗಿದೆ. ನಮ್ಮ ಪಾಲಿನ ತೆರಿಗೆ ಹಣವನ್ನು ನೀಡಬೇಕಾಗಿದೆ. ಅದನ್ನು ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ ಎಲ್ಲಿಯೂ ಎಡವಲ್ಲ, ಅದಕ್ಕಾಗಿ ವಿಶೇಷ ಧೈರ್ಯಬೇಕಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ಸಚಿವರು, ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ರೀತಿಯ ಅನ್ಯಾಯ ಆಗುವುದಿಲ್ಲ. ನಮ್ಮ ಪಕ್ಷದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ನಮ್ಮ ಪಾಲು ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next