Advertisement

DRT ಗೆ ಪಾಸ್‌ಪೋರ್ಟ್‌ ವಶಕ್ಕೆ ಪಡೆಯುವ ಅಧಿಕಾರವಿಲ್ಲ: ಹೈಕೋರ್ಟ್‌

11:21 PM Dec 15, 2023 | Team Udayavani |

ಬೆಂಗಳೂರು: ಸಾಲ ವಸೂಲಾತಿ ನ್ಯಾಯಮಂಡಳಿ(ಡಿಆರ್‌ಟಿ)ಗೆ ನಾಗರಿಕರ ಪಾಸ್‌ಪೋರ್ಟ್‌ ವಶಕ್ಕೆ ಪಡೆದುಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ವಶಕ್ಕೆ ಪಡೆದಿದ್ದ ಪಾಸ್‌ಪೋರ್ಟ್‌ ಹಿಂದಿರುಗಿಸಲು ನಿರಾಕರಿಸಿದ್ದ ಡಿಆರ್‌ಟಿ ಕ್ರಮ ಪ್ರಶ್ನಿಸಿ ಮುಂಬಯಿ ಮೂಲದ ಶಂಭು ಕುಮಾರ್‌ ಕಸ್ಲಿವಾಲ್‌ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Advertisement

ಡಿಆರ್‌ಟಿಯು ಸಿವಿಲ್‌ ನ್ಯಾಯಾಲಯದಂತೆ ಕಾರ್ಯನಿರ್ವಹಿಸಲಿದೆ. ಈ ನ್ಯಾಯಾಲಯಕ್ಕೆ ಪಾಸ್‌ಪೋರ್ಟ್‌ ಅನ್ನು ತನ್ನ ವಶದಲ್ಲಿಟ್ಟುಕೊಳ್ಳುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿರುವ ನ್ಯಾಯಾಲಯ, 2016ರಲ್ಲಿ ವಶಕ್ಕೆ ಪಡೆದಿದ್ದ ಪಾಸ್‌ಪೋರ್ಟ್‌ ಹಿಂದಿರುಗಿಸುವಂತೆ ಸೂಚನೆ ನೀಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next