ಮಂಗಳೂರು: ಮಾದಕ ದ್ರವ್ಯ ಸೇವನೆ ಮಾಡಿದ್ದ ಉತ್ತರ ಪ್ರದೇಶದ ಸಲ್ಮಾನ್(25)ನನ್ನು ಮಂಗಳವಾರ ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಅಮಲಿನಲ್ಲಿದ್ದ ಸಲ್ಮಾನ್‌ನನ್ನು ವಿಚಾರಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ್ದು, ಉತ್ತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement