Advertisement

ಮಾದಕ ವಸ್ತು ಸೇವನೆ ಅಪಾಯಕಾರಿ: ನ್ಯಾ|ವಸ್ತ್ರಮಠ

12:42 PM Jul 31, 2017 | Team Udayavani |

ಚಿತ್ರದುರ್ಗ: ಮಾದಕ ವಸ್ತುಗಳ ಸೇವನೆಯಿಂದ ದೇಹದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತವೆ. ಆದ್ದರಿಂದ ಮಾದಕ ವಸ್ತುಗಳಿಂದ ದೂರ ಉಳಿಯಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಕರೆ ನೀಡಿದರು. 

Advertisement

ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಇವುಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ನಿರ್ಮೂಲನೆ ಮತ್ತು ಮಾದಕ ವಸ್ತು ವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತು ಸೇವನೆ ಮಾನಸಿಕ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ದಿಂಡಲಕೊಪ್ಪ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದಲ್ಲಿ ಎಂತಹ ಸವಾಲುಗಳನ್ನು ಬೇಕಾದರೂ ಗೆಲ್ಲಬಹುದು ಹಾಗೂ ಮಾನಸಿಕವಾಗಿ ಪ್ರಬಲರಾಗಿರಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ವ್ಯಾಜ್ಯಗಳನ್ನು ಕಡಿಮೆ ಅವಧಿ ಯಾವುದೇ ಖರ್ಚಿಲ್ಲದೇ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ವಕೀಲರ ಸಂಘ ಉಪಾಧ್ಯಕ್ಷ ಕೆ. ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ಸಿ. ಶಿವು ಯಾದವ್‌, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಪ್ರಾಂಶುಪಾಲ ಪಿ.ಲಿಂಗಮೂರ್ತಿ ಮಾತನಾಡಿದರು. ಡಾ| ಸಿ.ಎಂ. ಗೋಪಾಲದಾಸ ಅವರು ಮಾದಕ ವಸ್ತುಗಳ ವ್ಯಸನದಿಂದ ದೂರವಿರುವ ಬಗ್ಗೆ, ಡಿಎಚ್‌ಒ ಕಚೇರಿಯ ಮನೋವೈದ್ಯ ಡಾ| ಆರ್‌. ಮಂಜುನಾಥ ಅವರು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು. ಉಪನ್ಯಾಸಕ ಸುರೇಶ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next