Advertisement

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಮಾಜಿ ಸಚಿವರ ಪುತ್ರ ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ

01:22 PM Sep 15, 2020 | keerthan |

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಮತ್ತೋರ್ವ ಆರೋಪಿಯ ಮನೆಗೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಮನೆಯ ಮೇಲೆ ಸಿಸಿಬಿ ಪೊಲೀಸರು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

Advertisement

ನಗರದ ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವ ಮನೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಸರ್ಚ್ ವಾರಂಟ್ ಪಡೆದಿರುವ ಸಿಸಿಬಿ ಪೊಲೀಸರು ಮನೆಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೇಶಾದ್ಯಂತ ಸೆಪ್ಟೆಂಬರ್ 25ರಿಂದ ಮತ್ತೆ ಲಾಕ್ ಡೌನ್ ಇಲ್ಲ: ಫ್ಯಾಕ್ಟ್ ಚೆಕ್ ನಲ್ಲಿ ಸತ್ಯ ಬಯಲು

ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಅವರ ಪುತ್ರನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಎ6 ಆರೋಪಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರದಲ್ಲಿ ಆದಿತ್ಯ ಆಳ್ವ ಕುಟುಂಬ ನಾಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಸಿಸಿಬಿ ಇಂದು ರೈಡ್ ಮಾಡಿ ಪರಿಶೀಲನೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next