ಬೆಂಗಳೂರು: ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ವೇಳೆ ಆರೋಪಿತ ಯುವಕರ ರಕ್ತದ ಮಾದರಿಯ ಪಡೆದು ಪರಿಶೀಲಿಸಲಾಗಿದೆ.
ಈ ವೇಳೆ ಇದುವರೆಗಿನ ತಪಾಸಣೆಯಲ್ಲಿ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಯಲ್ಲಿ ವ್ಹೀಲಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಯುವಕ ಮಾದಕ ವಸ್ತು ಸೇವನೆ ಮಾಡಿರುವುದು ಪತ್ತೆಯಾಗಿತ್ತು. ಹೀಗಾಗಿ ಈತನ ವಿರುದ್ಧ ಕಾಮಾಕ್ಷಿಪಾಳ್ಯ ಕಾನೂನು ಮತ್ತು ಸುವ್ಯವಸ್ಥೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ರಸ್ತೆ ಅಪಘಾತ ಪ್ರಕರಣಗಳಲ್ಲೂ ಅಪಘಾತ ಎಸಗಿದ ಚಾಲಕ ಹಾಗೂ ಗಾಯಗೊಂಡು ಅಥವಾ ಮೃತಪಟ್ಟ ವ್ಯಕ್ತಿಗಳ ರಕ್ತದ ಮಾದರಿ ಪಡೆಯಲಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ನಡೆದ ಮೂರು ರಸ್ತೆ ಅಪಘಾತ ಪ್ರಕರಣದಲ್ಲಿ ಮೂವರು ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳ ರಕ್ತ ಮಾದರಿಯಲ್ಲಿ ಮದ್ಯ ಸೇವಿಸಿರುವುದು ಪತ್ತೆಯಾಗಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 304(ಉದ್ದೇಶವಿಲ್ಲದೆ ನಡೆದ ಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡ 8 ಪ್ರಕರಣಗಳಲ್ಲೂ ಇದೇ ಪ್ರಕರಣ ದಾಖಲಿಸ ಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಹೇಳಿದರು.