Advertisement

ಕೋವಿಡ್ ಕೇಂದ್ರಗಳಿಗೆ ಔಷಧ ಕಿಟ್‌

05:59 PM May 23, 2021 | Team Udayavani |

ಮೂಡಲಗಿ: ಕೊರೊನಾ ಎರಡನೇ ಅಲೆಗೆ ಬ್ರೆಕ್‌ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್‌ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ಔಷಧ ಕಿಟ್‌ ವಿತರಿದ್ದಾರೆ.

Advertisement

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್‌ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಕಿಟ್‌ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್‌ ತಾಲೂಕು ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ ಅವರು, ಸೋಂಕಿತರಿಗೆ ಅಗತ್ಯವಿರುವ ಔಷಧ ಕಿಟ್‌ಗಳನ್ನು ವಿತರಿಸುತ್ತಿರುವ ಶಾಸಕರ ಮಾನವೀಯತೆ ಮೆಚ್ಚುವಂತದ್ದು. ಈಗಾಗಲೇ ಅವಳಿ ತಾಲೂಕಿನಲ್ಲಿ ಸೋಂಕಿತರಿಗೆ ಕೋವಿಡ್‌ ಕೇರ್‌ ಸೆಂಟರ್‌ ತೆರೆದು ಸ್ವಂತ ವೆಚ್ಚದಲ್ಲಿ ಆಕ್ಸಿಜನ್‌ ನೀಡುತ್ತಿದ್ದಾರೆ.

ಗೋಕಾಕ್‌, ಮಲ್ಲಾಪೂರ.ಪಿ.ಜಿ. ಮೂಡಲಗಿ ಮತ್ತು ಯಾದವಾಡದಲ್ಲಿ ಅನುಕೂಲ ಕಲ್ಪಿಸಿಕೊಟ್ಟು ಪ್ರತಿ ಹಂತದಲ್ಲಿಯೂ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಮಾಡುತ್ತಿದ್ದಾರೆ. ಸೋಂಕಿತರಿಗೆ ಅಗತ್ಯವಾದ ಎಲ್ಲ ಬಗೆಯ ವಸ್ತುಗಳನ್ನು ನೀಡುತ್ತ, ಅವರ ಆರೈಕೆಗಾಗಿ ತಮ್ಮ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ ಎಂದು ಹೇಳಿದರು.

ಹಿರಿಯ ತಜ್ಞ ವೈದ್ಯ ಡಾ| ಆರ್‌. ಎಸ್‌. ಬೆಂಚಿನಮರಡಿ ಮಾತನಾಡಿ, ಲಾಕ್‌ ಡೌನ್‌ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಬಂದರೆ ಅಪಾಯಕಾರಿ ಆಗಬಹುದು. ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅವಳಿ ತಾಲೂಕಿನ ಜನರು ಸುರಕ್ಷಿತವಾಗಿ ಇರಬೇಕೆಂಬುದು ಶಾಸಕರ ಆಶಯವಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ಕೊರೊನಾ ನಿಯಂತ್ರಣ ಸಾಧಿಸಲು ಎಲ್ಲರೂ ಬೆನ್ನೆಲುಬಾಗಿ ನಿಲ್ಲುವಂತೆ ಮನವಿ ಮಾಡಿಕೊಂಡರು.

ಬಿಇಓ ಎ.ಸಿ.ಮನ್ನಿಕೇರಿ, ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷ ರಾಮಣ್ಣಾ ಹಂದಿಗುಂದ, ಉಪ ತಹಶೀಲ್ದಾರ್‌ ಶಿವಾನಂದ ಬಬಲಿ, ಡಾ| ಭಾರತಿ ಕೋಣಿ, ಸಿಪಿಐ ವೆಂಕಟೇಶ ಮುರನಾಳ, ಸಬ್‌ ಇನ್ಸ್‌ ಪೆಕ್ಟರ್‌ ಹಾಲಪ್ಪ ಬಾಲದಂಡಿ. ದಲಿತ ಮುಖಂಡ ಮರೆಪ್ಪ ಮರೆಪ್ಪಗೋಳ, ಮೂಡಲಗಿ ವ್ಯಾಪ್ತಿಯ ಪ್ರಾ.ಆ.ಕೇಂದ್ರದ ವೈದ್ಯಾ ಧಿಕಾರಿಗಳು, ಆಶಾ-ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next