ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮನೆ ಮನೆಗೆ ತೆರಳಿ ಕೋವಿಡ್ ನಿಯಂತ್ರಣಕ್ಕಿರುವ ಔಷ ಧಗಳ ಕಿಟ್ ತಲುಪಿಸಲು ಆಂದೋಲನ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಕೋವಿಡ್-19 ರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ಮತ್ತು ಜಿಲ್ಲೆಯಲ್ಲಿನ ಆರೋಗ್ಯ ಸೌಲಭ್ಯಗಳ ಕುರಿತು ಜಿಲ್ಲಾಮಟ್ಟದ ಅ ಧಿಕಾರಿಗಳೊಂದಿಗೆ ಸಭೆ ಕೈಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆರಂಭಿಸಲು ಉದ್ದೇಶಿಸಿರುವ ಕೋವಿಡ್ ನಿರೋಧಕ ಔಷ ಧಗಳ ಕಿಟ್ ವಿತರಣೆಗೆ ಮಹಾನಗರ ವ್ಯಾಪ್ತಿಯಲ್ಲಿ ಪಾಲಿಕೆ ಅಧಿಕಾರಿ ಅಜೀಜ್ ದೇಸಾಯಿ ಅವರನ್ನು ಹಾಗೂ ಗ್ರಾಮೀಣ ಭಾಗದ ಉಸ್ತುವಾರಿಗಾಗಿ ಜಿಪಂ ಉಪಕಾರ್ಯದರ್ಶಿಯನ್ನು ನೇಮಿಸಲಾಗುವುದು. ಆಂದೋಲನ ಯಶಸ್ವಿಗೊಳಿಸಲು ಗ್ರಾಪಂ ಸಿಬ್ಬಂದಿ, ಆಶಾ, ಬೀಟ್ ಪೊಲೀಸ್ ಮತ್ತು ಅಗತ್ಯವಿದ್ದಲ್ಲಿ ಸ್ಥಳೀಯ ಸ್ವಯಂ ಸೇವಾ ಸಂಘಟನೆಗಳ ಸಹಕಾರದೊಂದಿಗೆ ಕೆಲಸ ಮಾಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಹೆಚ್ಚಳದ ಜತೆಗೆ ನೆರೆಹೊರೆಯ ಜಿಲ್ಲೆಯ ಸೋಂಕಿತರು ಜಿಲ್ಲೆಯ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಎಲ್ಲವನ್ನೂ ಸರಿದೂಗಿಸಬೇಕು. ಇದು ಸವಾಲಿನ ಕೆಲಸವಾಗಿದ್ದರೂ ಜಿಲ್ಲಾಡಳಿತ, ಕಿಮ್ಸ್ ಆಸ್ಪತ್ರೆ, ಸಮರ್ಪಕವಾಗಿ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವಷ್ಟು ಬೆಡ್‌ಗಳು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಅವರಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್, ಆಕ್ಸಿಜನ್ ಅಗತ್ಯ ಬೀಳುತ್ತದೆ. ಈಗಾಗಲೇ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರವೂ ಸಹಕಾರ ನೀಡುತ್ತಿದೆ ಎಂದರು.
ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಯಲ್ಲಿ ಜರುಗಿದ ಘಟನೆ ದುರದೃಷ್ಟಕರವಾಗಿದ್ದು, ಸಮರ್ಪಕವಾದ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸಚಿವರು ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶಿಸಿದರು. ಈ ತೊಂದರೆ ಮರುಕಳಿಸದಂತೆ ಎಲ್ಲಾ ಅ ಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಅಡಚಣೆ, ತೊಂದರೆ ಉಂಟಾದಾಗ ಅಧಿ ಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಯಾವುದೇ ಖಾಸಗಿ ಆಸ್ಪತ್ರೆ ಈ ಸಂದರ್ಭದಲ್ಲಿ ಬಂದ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದೂ ಹೇಳಿದರು. ಶಾ
ಸಕ ಅರವಿಂದ ಬೆಲ್ಲದ ಮಾತನಾಡಿ, ಆಸ್ಪತ್ರೆಗಳಲ್ಲಿ ತಕ್ಷಣಕ್ಕೆ ಬೆಡ್ ಸಿಗುವಂತೆ, ರೆಮ್‌ಡೆಸಿವಿಯರ್ ಔಷಧ ಲಭಿಸುವಂತೆ ಮತ್ತು ಕೋವಿಡ್ ಚಿಕಿತ್ಸೆಗೆ ಬರುವ ಸೋಂಕಿತರು ಚಿಕಿತ್ಸೆಗಾಗಿ ಅಲೆದಾಡದಂತೆ ಕಿಮ್ಸ್ ವ್ಯವಸ್ಥೆ ಸ್ಪಂ ದಿಸಬೇಕು ಎಂದರು. ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿ, ಜಿಲ್ಲೆಯ ಅನೇಕ ತಾಲೂಕಾಸ್ಪತ್ರೆಗಳಲ್ಲಿ ಬಳಕೆ ಮಾಡದೇ ಖಾಲಿ ಉಳಿದಿರುವ ವೆಂಟಿಲೇಟರ್ ಗಳನ್ನು ಕಿಮ್ಸ್ ಹಾಗೂ ಜಿಲ್ಲಾಸ್ಪತ್ರೆಗಳಿಗೆ ನೀಡಬೇಕು. ಕೋವಿಡ್ ನಿಯಂತ್ರಣವಾದ ಮೇಲೆ ಮರಳಿ ಆಯಾ ಆಸ್ಪತ್ರೆಗಳಿಗೆ ತಲುಪಿಸಬೇಕು. ವಿವಿಧ ಸಂಘ-ಸಂಸ್ಥೆ, ಸಂಘಟನೆಗಳು ಸಾರ್ವಜನಿಕರಿಗೆ ನೆರವಾಗಲು ಉಚಿತವಾಗಿ ಹಣ್ಣುಹಂಪಲು, ಮಾಸ್ಕ್, ಸ್ಯಾನಿಟೈಸರ್, ಆಹಾರ ಸಾಮಗ್ರಿ ವಿತರಿಸಲು ಅವಕಾಶ ಕಲ್ಪಿಸುವಂತೆ ವಿನಂತಿಸುತ್ತಿದ್ದಾರೆ.
ನಗರ ಪೊಲೀಸ್ ಆಯುಕ್ತರು ಈ ಕುರಿತು ಪರಿಶೀಲಿಸಿ ಅವಕಾಶ ಕಲ್ಪಿಸುವಂತೆ ವಿನಂತಿಸಿದರು. ಡಿಸಿ ನಿತೇಶ್ ಪಾಟೀಲ ಅವರು ಜಿಲ್ಲೆಯಲ್ಲಿ ವಿವಿಧ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರು, ಅವರಿಗೆ ನೀಡುತ್ತಿರುವ ಚಿಕಿತ್ಸೆ, ಬೆಡ್‌ಗಳ ಲಭ್ಯತೆ, ಆಕ್ಸಿಜನ್, ವೆಂಟಿಲೇಟರ್ ಕುರಿತು ಸಚಿವರಿಗೆ ವಿವರಿಸಿದರು. ನಗರ ಪೊಲೀಸ್ ಆಯುಕ್ತ ಲಾಬೂರಾಮ್, ಜಿಪಂ ಸಿಇಒ ಡಾ| ಬಿ. ಸುಶೀಲಾ, ಎಸ್‌ಪಿ ಪಿ. ಕೃಷ್ಣಕಾಂತ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಎಸಿ ಡಾ| ಗೋಪಾಲಕೃಷ್ಣ ಬಿ. ಮೊದಲಾದವರಿದ್ದರು. ಸಭೆಗೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಧಿಕಾರಿ ನಿತೇಶ ಪಾಟೀಲ ಅವರೊಂದಿಗೆ ಆಕ್ಸಿಜನ್ ರ್ಯಾಪಿಡ್ ಆ್ಯಕ್ಷನ್ ಟೀಂ ಕಾರ್ಯ ಪರಿಶೀಲಿಸಿದರು.