Advertisement

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬೆಳೆಯಲು ಸರಕಾರಿ ವ್ಯವಸ್ಥೆಯೂ ಒಂದು ಕಾರಣ: ಎಚ್.ಕೆ.ಪಾಟೀಲ್

05:27 PM Sep 05, 2020 | sudhir |

ಗದಗ: ರಾಜ್ಯದಲ್ಲಿ ಡ್ರಗ್ ಮಾಫಿಯಾ ಕೇವಲ ಸಿನಿಮಾದವರಿಗೆ ಸೀಮಿತವಾಗಿಲ್ಲ. ಇದರ ಹಿಂದೆ ರೌಡಿಗಳು, ಅಧಿಕಾರಿಗಳು, ರಾಜಕಾರಣಿ ಗಳೂ ಇದ್ದಾರೆ. ಇದಕ್ಕೆ ಸರಕಾರಿ ವ್ಯವಸ್ಥೆಯೂ ಕೈಜೋಡಿಸುತ್ತಿದೆ. ಈ ಕುರಿತು ರಾಜ್ಯ ಸರಕಾರ ಸಮಗ್ರ ತನಿಖೆಗೆ ನಡೆಸಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಆಗ್ರಹಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಚಾರ ಇಂದು ನಿನ್ನೆಯದಲ್ಲ. ಈಗ ಸಿನಿಮಾದವರು ಸಿಕ್ಕಿಬಿದ್ದಿದ್ದಾರೆ ಎಂಬ ಕಾರಣಕ್ಕೆ ಅವರತ್ತ ಬೊಟ್ಟು ಮಾಡುವುದಲ್ಲ. ಗ್ರಡ್ಸ್ ಮಾಫಿಯಾ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬೆಳೆಯಲು ಸರಕಾರಿ ಅಧಿಕಾರಿಗಳು, ಸರಕಾರಿ ವ್ಯವಸ್ಥೆಯೂ ಕಾರಣವಾಗಿದೆ. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಮುಂದಾಗಿದ್ದಾರೆ. ಆದರೆ, ತನಿಖೆ ಯಾವುದೇ ಕಾರಣಕ್ಕೂ ಅರ್ಧಕ್ಕೆ ನಿಲ್ಲದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರು ಕೈಗೊಳ್ಳುವ ಕ್ರಮ ಗಟ್ಟಿಯಾಗಿರಬೇಕು ಎಂದು ಒತ್ತಾಯಿಸಿದರು.

ಈ ನಾಡಿನಲ್ಲಿ ಡ್ರಗ್ಸ್ ಮಾಫಿಯಾವನ್ನು ಬೇರು ಮಟ್ಟದಿಂದ ಕಿತ್ತೊಗೆಯಲು ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಕೈಗೊಳ್ಳುವ ಕ್ರಮಕ್ಕೆ ವಿರೋಧ ಪಕ್ಷ ರಚನಾತ್ಮಕವಾಗಿ ಕೈಜೋಡಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next