ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಆಫ್ರಿಕಾ ಮೂಲದ ಹೇನ್ರಿ (33) ಮತ್ತು ನೈಜೀರಿಯಾ ಮೂಲದ ಟೋನಿ(32) ಬಂಧಿತರು.
ಆರೋಪಿಗಳಿಂದ 21 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, 2 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಹೇನ್ರಿ, ಇತ್ತೀಚೆಗೆ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ರಸ್ತೆ ಬಳಿ ಗ್ರಾಹಕರಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾ ಚರಣೆ ನಡೆಸಿ ಮಾಲು ಸಮೇತ ಬಂಧಿಸಲಾಗಿತ್ತು. ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ನೈಜೀರಿಯಾ ಮೂಲದ ಟೋನಿಯನ್ನು ಬಂಧಿಸಲಾಗಿದೆ.
ಆರೋಪಿಗಳು ಬ್ಯೂಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಹೆಸರುಘಟ್ಟ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿದ್ದರು. ಸುಲಭವಾಗಿ ಹಣ ಗಳಿ ಸಲು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿ ದ್ದಾರೆ. ದೆಹಲಿ ಮೂಲದ ಡ್ರಗ್ಸ್ ಪೆಡ್ಲರ್‌ಗಳಿಂದ ಕಡಿಮೆ ಬೆಲೆಗೆ ಮಾದಕವಸ್ತು ಖರೀದಿಸಿ ನಗರಕ್ಕೆ ತಂದು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿ ಗಳು, ಮಾದಕ ವ್ಯಸನಿಗಳಿಗೆ ದುಬಾರಿ ಬೆಲೆಗೆ ಮಾ ರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.