Advertisement

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

01:00 AM Apr 25, 2024 | Team Udayavani |

ಸುಳ್ಯ: ಎಂಡಿಎಂಎಯನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ ಸುಳ್ಯದ ಇಬ್ಬರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.

Advertisement

ಬೆಂಗಳೂರಿನಿಂದ 1.5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತೆಗೆದುಕೊಂಡು ಹೋಗುತ್ತಿರುವ ವೇಳೆ ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ.ಪ್ರಜಿತ್‌ ನೇತೃತ್ವದ ತಂಡ ಕೇರಳದ ಮಾನಂದವಾಡಿಯಲ್ಲಿನ ಚೆಕ್‌ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್‌ ಫಾರೂಕ್‌ ಮತ್ತು ಎ.ಎಚ್‌. ಸಿದ್ದಿಕ್‌ನನ್ನು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿ ಹೊಂದಿದ್ದರು ಎಂದು ತನಿಖೆಯಲ್ಲಿ ಬಹಿರಂಗಗೊಂಡಿದೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ 4 ಸಾವಿರ ರೂ.ಗೆ ಮಾರಾಟ ಮಾಡಲು ಕಳ್ಳಸಾಗಣೆ ಮಾಡಲಾಗಿತ್ತು. ಆರೋಪಿಗಳು ಎಂಡಿಎಂಎ ಕಳ್ಳಸಾಗಣೆ ಮಾಡಲು ಬಳಸಿದ ಕಾರನ್ನು ಅಬಕಾರಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next